Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:17 - ಪರಿಶುದ್ದ ಬೈಬಲ್‌

17 ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದು ತಂದನು; ಇಗೋ, ಕೋಣೆಗಳೂ ಅಂಗಳದ ಸುತ್ತಲೂ ಕಲ್ಲುಹಾಸಿದ ನೆಲವೂ ಕಾಣಿಸಿದವು; ಕಲ್ಲುಹಾಸಿದ ನೆಲದ ಮೇಲೆ ಒಟ್ಟಾಗಿ ಮೂವತ್ತು ಕೊಠಡಿಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು; ಒಟ್ಟಾಗಿ ನೆಲಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:17
22 ತಿಳಿವುಗಳ ಹೋಲಿಕೆ  

ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳತೆ ಮಾಡದೆ ಬಿಟ್ಟುಬಿಡು. ಅದನ್ನು ಯೆಹೂದ್ಯರಲ್ಲದ ಜನರಿಗೆ ಬಿಟ್ಟಿದೆ. ಆ ಜನರು ಪವಿತ್ರ ನಗರದ ಮೇಲೆ ನಲವತ್ತೆರಡು ತಿಂಗಳ ಕಾಲ ತುಳಿದಾಡುವರು.


ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.


ಆಮೇಲೆ ಅವನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ನಾಲ್ಕು ಮೂಲೆಗಳಿಗೆ ನನ್ನನ್ನು ಕರೆದುಕೊಂಡು ಹೋದನು. ವಿಶಾಲವಾದ ಪ್ರಾಕಾರದ ಪ್ರತೀ ಮೂಲೆಗಳಲ್ಲಿ ಇನ್ನೊಂದು ಚಿಕ್ಕ ಪ್ರಾಕಾರವಿರುವದನ್ನು ಕಂಡೆನು.


ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಈ ಪ್ರದೇಶದಲ್ಲಿರುತ್ತದೆ.


ಕೆರೂಬಿದೂತರ ರೆಕ್ಕೆಗಳ ಬಡಿತದ ಶಬ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿತ್ತು. ಅದು ತುಂಬಾ ಗಟ್ಟಿಯಾದ ಶಬ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಬ್ದದಂತಿತ್ತು.


ಆಗ ಹಿಜ್ಕೀಯನು ದೇವಾಲಯದಲ್ಲಿ ಉಗ್ರಾಣದ ಕೋಣೆಗಳನ್ನು ಕಟ್ಟಲು ಯಾಜಕರಿಗೆ ಆಜ್ಞಾಪಿಸಿದನು. ಅಂತೆಯೇ ಅವುಗಳನ್ನು ಕಟ್ಟಲಾಯಿತು.


ಲೇವಿಯರು ಆರೋನನ ಸಂತತಿಯವರಾದ ಯಾಜಕರಿಗೆ ದೇವಾಲಯದಲ್ಲಿ ಸೇವೆಮಾಡಲು ಸಹಾಯ ಮಾಡುತ್ತಿದ್ದರು. ಇದಲ್ಲದೆ ಅವರು ದೇವಾಲಯದ ಹೊರಗಿನ ಅಂಗಳವನ್ನೂ ದೇವಾಲಯದ ಎಡಬಲಗಡೆಗಳಲ್ಲಿದ್ದ ಕೋಣೆಗಳನ್ನೂ ನೋಡಿಕೊಳ್ಳುತ್ತಿದ್ದರು; ಪರಿಶುದ್ಧ ಸಾಮಾಗ್ರಿಗಳನ್ನು ಯಾವಾಗಲೂ ಶುದ್ಧವಾಗಿಡುತ್ತಿದ್ದರು. ಹೀಗೆ ದೇವಾಲಯದ ಸೇವೆಯನ್ನು ಮಾಡುತ್ತಿದ್ದರು.


ಲೇವಿಕುಲದ ನಾಲ್ಕು ಮಂದಿ ಎಲ್ಲಾ ದ್ವಾರಪಾಲಕರಿಗೆ ನಾಯಕರಾಗಿದ್ದರು. ದೇವಾಲಯದ ಕೋಣೆಗಳನ್ನೂ ಅಲ್ಲಿಟ್ಟಿರುವ ಹಣದ ಪೆಟ್ಟಿಗೆಗಳನ್ನೂ ಅವರು ಕಾಯುತ್ತಿದ್ದರು.


ಇದರ ಪ್ರವೇಶ ದ್ವಾರವು ಉತ್ತರ ದಿಕ್ಕಿನಲ್ಲಿದ್ದಾಗ್ಯೂ, ಹತ್ತು ಮೊಳ ಅಗಲ, ನೂರು ಮೊಳ ಉದ್ದದ ದಾರಿಯು ಆ ಕಟ್ಟಡದ ದಕ್ಷಿಣ ಭಾಗದಲ್ಲಿತ್ತು.


ಆ ಕೋಣೆಗಳು ಒಂದರ ಮೇಲೊಂದು ಮೂರು ಅಂತಸ್ತಿನಲ್ಲಿದ್ದವು. ಪ್ರತಿ ಅಂತಸ್ತಿನಲ್ಲಿ ಮೂವತ್ತು ಕೊಠಡಿಗಳಿದ್ದವು. ಆಲಯದ ಗೋಡೆಯು ಮೆಟ್ಟಿಲು ಮೆಟ್ಟಿಲುಗಳಾಗಿ ಕಟ್ಟಲ್ಪಟ್ಟಿತ್ತು. ಪಕ್ಕದ ಕೋಣೆಗಳು ಈ ಮೆಟ್ಟಿಲುಗಳ ಮೇಲೆ ಆಧಾರಗೊಂಡಿದ್ದವು. ಅವು ಆಲಯದ ಗೋಡೆಯನ್ನು ಆಧಾರ ಮಾಡಿಕೊಂಡಿರಲಿಲ್ಲ.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು.


ನಂತರ ಸೊಲೊಮೋನನು ದೇವಾಲಯದ ಗೋಡೆಯ ಸುತ್ತಲೂ ಸಾಲಾಗಿ ಕೊಠಡಿಗಳನ್ನು ನಿರ್ಮಿಸಿದನು. ಈ ಕೊಠಡಿಗಳನ್ನು ಒಂದರ ಮೇಲೆ ಮತ್ತೊಂದನ್ನು ಕಟ್ಟಿಸಿದನು. ಈ ಸಾಲು ಕೊಠಡಿಗಳು ಮೂರು ಅಂತಸ್ತುಗಳನ್ನು ಹೊಂದಿದ್ದವು.


ದ್ವಾರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದ್ವಾರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.


ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.


ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.


ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.


ಯಾಜಕರ ಕೋಣೆಗಳಿಗೂ ನಡುವೆ ಆಲಯದ ಸುತ್ತಲೂ ಇಪ್ಪತ್ತು ಮೊಳ ಅಂತರವಿತ್ತು.


ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಿನ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.


ಈ ಪ್ರವೇಶ ದ್ವಾರವು ಪ್ರಾಕಾರದ ಬದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು.


ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.


“ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು