Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:18 - ಪರಿಶುದ್ದ ಬೈಬಲ್‌

18 ದ್ವಾರದ ಉದ್ದ ಅಳತೆಯಷ್ಟು ನೆಲಗಟ್ಟಿನ ಅಗಲದ ಅಳತೆಯಾಗಿತ್ತು. ನೆಲಗಟ್ಟು ಪ್ರವೇಶ ದ್ವಾರದ ಒಳಗಿನ ತುದಿಯ ತನಕವಿತ್ತು. ಇದು ಕೆಳಗಣ ನೆಲಗಟ್ಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕೆಳಗಣ ಕಲ್ಲುಹಾಸಿದ ನೆಲವೂ ಹೆಬ್ಬಾಗಿಲುಗಳ ಎರಡು ಪಕ್ಕಗಳವರೆಗೂ ಹಾಸಲ್ಪಟಿತ್ತು. ಅದರ ಅಗಲವೂ ಬಾಗಿಲುಗಳ ಉದ್ದಕ್ಕೆ ಸಮನಾಗಿತ್ತು. ಇದು ಕೆಳಗಿನ ಕಲ್ಲುಹಾಸಿದ ನೆಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕೆಳಗಣ ನೆಲೆಗಟ್ಟು ಹೆಬ್ಬಾಗಿಲುಗಳ ಎರಡು ಪಕ್ಕಗಳಲ್ಲೂ ಹಾಸಲಾಗಿದ್ದ ಅವುಗಳಷ್ಟು ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕೆಳಗಣ ನೆಲಗಟ್ಟು ಹೆಬ್ಬಾಗಿಲುಗಳ ಎರಡು ಪಕ್ಕಗಳಲ್ಲಿಯೂ ಹಾಸಲ್ಪಟ್ಟು ಅವುಗಳಷ್ಟು ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಬಾಗಿಲುಗಳ ಪಾರ್ಷ್ವದಲ್ಲಿಯೂ ಬಾಗಿಲುಗಳ ಉದ್ದಕ್ಕೆ ಸರಿಯಾಗಿಯೂ ಇದ್ದ ಆ ಕಲ್ಲು ಹಾಸಿದ ನೆಲವು ಕೆಳಗಿನ ನೆಲಗಟ್ಟಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:18
2 ತಿಳಿವುಗಳ ಹೋಲಿಕೆ  

ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಿನ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು