Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:2 - ಪರಿಶುದ್ದ ಬೈಬಲ್‌

2 ದರ್ಶನವೊಂದರಲ್ಲಿ ಯೆಹೋವನು ನನ್ನನ್ನು ಇಸ್ರೇಲ್ ದೇಶಕ್ಕೆ ಒಯ್ದನು. ಆತನು ನನ್ನನ್ನು ಬಹಳ ಉನ್ನತ ಪರ್ವತದ ಬಳಿ ಇರಿಸಿದನು. ನನ್ನೆದುರಿಗಿದ್ದ ಆ ಪರ್ವತ ಒಂದು ನಗರದಂತೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣದ ಕಡೆ ಆ ಪರ್ವತದ ಮೇಲೆ ಪಟ್ಟಣದಂತಿರುವ ಕಟ್ಟಡಗಳು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂತು. ತೆಂಕಲಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡವು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:2
23 ತಿಳಿವುಗಳ ಹೋಲಿಕೆ  

“ನನಗಾದ ರಾತ್ರಿಯ ದರ್ಶನದಲ್ಲಿ ನಾಲ್ಕನೆ ಮೃಗವನ್ನು ಕಂಡೆ. ಅದು ಅತ್ಯಂತ ಬಲಿಷ್ಠವಾಗಿತ್ತು ಮತ್ತು ಭಯಂಕರವಾಗಿತ್ತು. ಅದು ಅತಿ ಶಕ್ತಿಶಾಲಿಯಾಗಿತ್ತು. ಅದಕ್ಕೆ ದೊಡ್ಡದೊಡ್ಡ ಕಬ್ಬಿಣದ ಹಲ್ಲುಗಳಿದ್ದವು. ಈ ಪ್ರಾಣಿಯು ತಾನು ಬೇಟೆಯಾಡಿದ ಪಶುವನ್ನು ತಂಡುತುಂಡು ಮಾಡುತ್ತಾ ತಿನ್ನುತ್ತಿತ್ತು; ಮಿಕ್ಕಿದ್ದನ್ನು ಅದು ತುಳಿಯುತ್ತಿತ್ತು. ಈ ನಾಲ್ಕನೆಯ ಪ್ರಾಣಿಯು ನಾನು ಅದಕ್ಕೂ ಮುಂಚೆ ನೋಡಿದ ಮೃಗಗಳಿಗಿಂತ ಭಿನ್ನವಾಗಿತ್ತು. ಈ ಮೃಗಕ್ಕೆ ಹತ್ತು ಕೊಂಬುಗಳಿದ್ದವು.


ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.


ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.


ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.


ಆಗ ಅದು ಕೈಯಂತಿದ್ದ ಒಂದನ್ನು ಚಾಚಿ ನನ್ನ ತಲೆಯ ಕೂದಲನ್ನು ಹಿಡಿದುಕೊಂಡಿತು. ಬಳಿಕ ಆತ್ಮವು ನನ್ನನ್ನು ಮೇಲಕ್ಕೆ ಎತ್ತಿ ದಿವ್ಯದರ್ಶನದಲ್ಲಿ ಜೆರುಸಲೇಮಿಗೆ ಕೊಂಡೊಯ್ಯಿತು. ಅದು ನನ್ನನ್ನು ಒಳದ್ವಾರಕ್ಕೆ ಕೊಂಡೊಯ್ಯಿತು. ಇದು ಉತ್ತರ ದಿಕ್ಕಿನಲ್ಲಿತ್ತು. ದೇವರನ್ನು ಸಿಟ್ಟಿಗೆಬ್ಬಿಸುವ ವಿಗ್ರಹವು ಈ ದ್ವಾರದ ಬಳಿ ಇತ್ತು.


ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು.


ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.


ದೇವಾಲಯದ ಪ್ರತಿಯೊಂದು ಭಾಗದ ನಕ್ಷೆಯನ್ನು ದಾವೀದನು ತಯಾರಿಸಿದ್ದನು. ದೇವಾಲಯದ ಸುತ್ತಣ ಅಂಗಳಗಳ ನಕ್ಷೆ ಮತ್ತು ಸುತ್ತಲೂ ಇರುವ ಕೋಣೆಗಳ ನಕ್ಷೆಯನ್ನು ದೇವಾಲಯದ ಪವಿತ್ರ ವಸ್ತುಗಳನ್ನು ಇಡುವ ಕೋಣೆಗಳ ಯೋಜನೆಯನ್ನು ಮತ್ತು ನಕ್ಷೆಗಳನ್ನು ಸೊಲೊಮೋನನಿಗೆ ಕೊಟ್ಟನು.


ಆದರೆ ಪರಲೋಕದಲ್ಲಿರುವ ಜೆರುಸಲೇಮ್ ಸ್ವತಂತ್ರಳಾದ ಸ್ತ್ರೀಯಂತಿದೆ. ಇದೇ ನಮ್ಮ ತಾಯಿ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು. ಈ ದರ್ಶನದಲ್ಲಿ ಮಕೆದೋನಿಯದ ನಾಡಿನಿಂದ ಬಂದ ಒಬ್ಬ ಮನುಷ್ಯನು ಅಲ್ಲಿ ನಿಂತುಕೊಂಡು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡು” ಎಂದು ಬೇಡಿಕೊಂಡನು.


‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.


“ಹೌದು, ಅವರು ಪರಿಶುದ್ಧ ಪಟ್ಟಣದ ನಿವಾಸಿಗಳಾಗಿದ್ದಾರೆ. ಅವರು ಇಸ್ರೇಲಿನ ದೇವರನ್ನು ಅವಲಂಬಿಸಿಕೊಂಡಿದ್ದಾರೆ. ಸರ್ವಶಕ್ತನಾದ ಯೆಹೋವನು ಎಂಬುದೇ ಆತನ ಹೆಸರು.


ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.


ಇಸ್ರೇಲಿನ ಪರ್ವತ ರಾಜ್ಯದಲ್ಲಿ ಅವರನ್ನು ಒಂದು ಜನಾಂಗವನ್ನಾಗಿ ಮಾಡುವೆನು. ಅವರೆಲ್ಲರಿಗೂ ಒಬ್ಬನೇ ರಾಜನಿರುವನು. ಅವರು ಇನ್ನು ಮುಂದೆ ಎರಡು ರಾಜ್ಯಗಳಾಗುವದಿಲ್ಲ.


ಆಮೇಲೆ ಅವನು ನನ್ನನ್ನು ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.


ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು