ಯೆಹೆಜ್ಕೇಲನು 40:23 - ಪರಿಶುದ್ದ ಬೈಬಲ್23 ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದ್ವಾರವಿತ್ತು. ಇದು ಪೂರ್ವದಲ್ಲಿದ್ದ ದ್ವಾರದಂತಿತ್ತು. ಅವನು ಒಳಗೋಡೆಯ ದ್ವಾರದಿಂದ ಹೊರಗೋಡೆಯ ದ್ವಾರದ ತನಕ ಅಳೆದಾಗ, ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೊರಗಣ ಅಂಗಳದ ಉತ್ತರ ಮತ್ತು ಪೂರ್ವಕ್ಕಿರುವ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ನೂರು ಮೊಳ ಅಳತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೊರಗಣ ಪ್ರಾಕಾರದ ಬಡಗಣ ಮೂಡಣ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಪ್ರಾಕಾರಕ್ಕೂ ಹೆಬ್ಬಾಗಿಲುಗಳು ಇದ್ದವು. ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ಐವತ್ತು ಮೀಟರ್ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 [ಹೊರಗಣ ಪ್ರಾಕಾರದ] ಬಡಗಣ ಮೂಡಣ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಪ್ರಾಕಾರಕ್ಕೂ ಹೆಬ್ಬಾಗಿಲುಗಳು ಇದ್ದವು; ಒಂದು ಬಾಗಿಲಿಂದ ಎದುರು ಬಾಗಿಲಿಗೆ ನೂರು ಮೊಳ ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು. ಅಧ್ಯಾಯವನ್ನು ನೋಡಿ |