ಯೆಹೆಜ್ಕೇಲನು 40:29 - ಪರಿಶುದ್ದ ಬೈಬಲ್29 ಅದರ ಕೋಣೆಗಳು, ಅಕ್ಕಪಕ್ಕದ ಗೋಡೆಗಳು, ಕೈಸಾಲೆ ಎಲ್ಲವೂ ಬೇರೆ ಪ್ರವೇಶದ್ವಾರಗಳ ಪ್ರಕಾರವೇ ಅಳತೆಯಲ್ಲಿದ್ದವು. ದ್ವಾರದ ಸುತ್ತಲೂ ಕಿಟಕಿಗಳಿದ್ದವು. ಆ ದ್ವಾರವು ಐವತ್ತು ಮೊಳ ಉದ್ದ ಇಪ್ಪತ್ತೈದು ಮೊಳ ಅಗಲವಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದರಲ್ಲಿಯೂ, ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ ಮತ್ತು ಅಗಲ ಇಪ್ಪತ್ತೈದು ಮೊಳವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29-30 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲ ಕಡೆಯಿದ್ದವು. ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲಾ ಕಡೆಯಿದ್ದವು; ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು. ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.