Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:37 - ಪರಿಶುದ್ದ ಬೈಬಲ್‌

37 ಕೈಸಾಲೆಯು ಹೊರ ಪ್ರಾಕಾರದಲ್ಲಿಯ ದ್ವಾರದ ಕೊನೆಯಲ್ಲಿತ್ತು. ಖರ್ಜೂರ ವೃಕ್ಷದ ಚಿತ್ರವು ಗೋಡೆಗಳ ಎರಡೂ ಕಡೆಯ ಮೇಲೆ ಕೆತ್ತಲ್ಪಟ್ಟಿತ್ತು. ದ್ವಾರವನ್ನು ಮುಟ್ಟಲು ಎಂಟು ಮೆಟ್ಟಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದರ ಕಂಬಗಳು, ಕೈಸಾಲೆಗಳು ಹೊರಗಣ ಅಂಗಳಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದರೆ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು. ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದರ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು; ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವದಕ್ಕೆ ಎಂಟು ಮೆಟ್ಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:37
3 ತಿಳಿವುಗಳ ಹೋಲಿಕೆ  

ಅದರ ಕೈಸಾಲೆ ಹೊರ ಪ್ರಾಕಾರದ ಪಕ್ಕದಲ್ಲಿ ಪ್ರವೇಶ ದ್ವಾರದ ಕೊನೆಯಲ್ಲಿತ್ತು. ದ್ವಾರದ ಎರಡು ಪಕ್ಕಗಳ ಗೋಡೆಗಳಲ್ಲಿ ಖರ್ಜೂರ ವೃಕ್ಷದ ಕೆತ್ತನೆ ಕೆಲಸವಿತ್ತು. ಆ ದ್ವಾರಕ್ಕೇರಲು ಎಂಟು ಮೆಟ್ಟಿಲುಗಳಿದ್ದವು.


ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದ್ವಾರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಆ ಪ್ರವೇಶ ದ್ವಾರವನ್ನು ಹತ್ತಲು ಎಂಟು ಮೆಟ್ಟಿಲುಗಳಿದ್ದವು.


ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು