ಯೆಹೆಜ್ಕೇಲನು 40:45 - ಪರಿಶುದ್ದ ಬೈಬಲ್45 ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆಗ ಅವನು ನನಗೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಮೇಲ್ವಿಚಾರಣೆಯನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆಗ ಅವನು ನನಗೆ - ತೆಂಕಲಿಗೆ ಅಭಿಮುಖವಾಗಿರುವ ಈ ಕೋಣೆಯು ದೇವಾಲಯದ ಪಾರುಪತ್ಯವನ್ನು ನಡಿಸುವ ಯಾಜಕರಿಗೆ ನೇಮಕವಾಗಿದೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.