Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:46 - ಪರಿಶುದ್ದ ಬೈಬಲ್‌

46 ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿ ಸೇವಕರಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಬಡಗಲಿಗೆ ಅಭಿಮುಖವಾಗಿರುವ ಆ ಕೋಣೆಯು ಯಜ್ಞವೇದಿಯ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ; ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಯೆಹೋವನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:46
16 ತಿಳಿವುಗಳ ಹೋಲಿಕೆ  

“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನ್ನು ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಆಗ ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನ ಸ್ಥಾನದಲ್ಲಿ ಸೇನಾಧಿಪತಿಯನ್ನಾಗಿ ಸೊಲೊಮೋನನು ನೇಮಿಸಿದನು. ಎಬ್ಯಾತಾರನ ಸ್ಥಾನದಲ್ಲಿ ಚಾದೋಕನನ್ನು ನೂತನ ಪ್ರಧಾನಯಾಜಕನನ್ನಾಗಿ ನೇಮಿಸಿದನು.


ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.


“ನಾನು ಮತ್ತೆ ಕೋಪಗೊಂಡು ಇಸ್ರೇಲರನ್ನು ದಂಡಿಸದಂತೆ ನೀವು ಪವಿತ್ರಸ್ಥಳವನ್ನು ಮತ್ತು ಯಜ್ಞವೇದಿಕೆಯನ್ನು ಕಾಯಬೇಕು.


ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


“ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ


ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು