ಯೆಹೆಜ್ಕೇಲನು 40:7 - ಪರಿಶುದ್ದ ಬೈಬಲ್7 ದ್ವಾರಪಾಲಕರ ಕೋಣೆಗಳ ಉದ್ದಗಲವು ಒಂದು ಅಳತೆಕೋಲಿನಷ್ಟಿತ್ತು. ಆ ಕೋಣೆಗಳ ನಡುವೆ ಇದ್ದ ಗೋಡೆಯ ಅಗಲ ಐದು ಮೊಳ ಆಲಯಕ್ಕೆ ಎದುರಾಗಿದ್ದ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಕೂಡಾ ಒಂದು ಅಳತೆ ಕೋಲಿನಷ್ಟಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಲ್ಲಿ ಗೋಡೆಯಲ್ಲಿದ್ದ ಒಂದೊಂದು ಕೋಣೆಯು ಒಂದು ಕೋಲು ಉದ್ದವಾಗಿಯೂ, ಒಂದು ಕೋಲು ಅಗಲವಾಗಿಯೂ ಇತ್ತು. ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಆ ಗೋಡೆಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಒಂದು ಕೋಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲಿ ಒಂದೊಂದು ಕೋಣೆಯ ಉದ್ದ ಮೂರು ಮೀಟರ್, ಅಗಲ ಮೂರು ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅಲ್ಲಿ [ಗೋಡೆಯಲ್ಲಿದ್ದ] ಒಂದೊಂದು ಕೋಣೆಯ ಉದ್ದ ಒಂದು ಕೋಲು, ಅಗಲ ಒಂದು ಕೋಲು; ಆ ಗೋಡೇಕೋಣೆಗಳು ಒಂದಕ್ಕೊಂದು ಐದೈದು ಮೊಳ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಲಿನ ಅಗಲವು ಒಂದು ಕೋಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು. ಅಧ್ಯಾಯವನ್ನು ನೋಡಿ |
ಈ ಕಟ್ಟಡವು ಮೂರು ಅಂತಸ್ತು ಎತ್ತರವಿದ್ದಾಗ್ಯೂ ಇದಕ್ಕೆ ಹೊರಗಿನ ಪ್ರಾಕಾರಕ್ಕೆ ಇದ್ದಂತೆ ಸ್ತಂಭಗಳಿರಲಿಲ್ಲ. ಮೇಲಿನ ಅಂತಸ್ತಿನ ಕೋಣೆಗಳು, ಮಧ್ಯ ಮತ್ತು ಕೆಳಗಿನ ಅಂತಸ್ತುಗಳ ಕೋಣೆಗಳಿಂದ ಹಿಂದಕ್ಕೆ ಇದ್ದವು. ಮೇಲಿನಂತಸ್ತು, ಮಧ್ಯ ಅಂತಸ್ತಿಗಿಂತ ಕಿರಿದಾಗಿತ್ತು. ಮತ್ತು ಮಧ್ಯ ಅಂತಸ್ತು ಕೆಳಗಿನ ಅಂತಸ್ತಿಗಿಂತ ಅಗಲದಲ್ಲಿ ಕಿರಿದಾಗಿತ್ತು. ಯಾಕೆಂದರೆ ಮೇಲಂತಸ್ತುಗಳು ಆ ಜಾಗವನ್ನು ಆಕ್ರಮಿಸಿದ್ದವು.