12 ಆಲಯದ ಪಶ್ಚಿಮ ಭಾಗದ ಕಿರಿದಾದ ಸ್ಥಳದಲ್ಲಿ ಒಂದು ಕಟ್ಟಡವಿತ್ತು. ಇದು ಎಪ್ಪತ್ತು ಮೊಳ ಅಗಲವಾಗಿದ್ದು ತೊಂಭತ್ತು ಮೊಳ ಉದ್ದವಾಗಿತ್ತು. ಅದರ ಸುತ್ತಲಿನ ಗೋಡೆಯು ಐದು ಮೊಳ ದಪ್ಪವಾಗಿತ್ತು.
12 ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು.
ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.
ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.
ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.