ಯೆಹೆಜ್ಕೇಲನು 41:22 - ಪರಿಶುದ್ದ ಬೈಬಲ್22 ಒಂದು ವಸ್ತು ಇತ್ತು. ಅದು ಮೂರು ಮೊಳ ಎತ್ತರ, ಎರಡು ಮೊಳ ಉದ್ದವಿತ್ತು. ಅದರ ಮೂಲೆಗಳು, ಅದರ ಚೌಕಟ್ಟು ಮತ್ತು ಬದಿಗಳೆಲ್ಲಾ ಮರದಿಂದ ಮಾಡಿದ್ದವುಗಳಾಗಿದ್ದವು. “ಈ ಮೇಜು ಯೆಹೋವನ ಸನ್ನಿಧಾನದಲ್ಲಿದೆ” ಎಂದು ಆ ಮನುಷ್ಯನು ನನಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅಲ್ಲಿ ಮರದ ವೇದಿಯೊಂದಿತ್ತು; ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳ; ಅದರ ಮೂಲೆಗಳೂ ಪೀಠವೂ ಪಕ್ಕಗಳೂ ಮರದ್ದೇ; ಆ ಪುರುಷನು ನನಗೆ - ಇದು ಯೆಹೋವನ ಸಮ್ಮುಖದ ಮೇಜು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.