Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:3 - ಪರಿಶುದ್ದ ಬೈಬಲ್‌

3 ಆಮೇಲೆ ಅವನು ಕೊನೆಯ ಕೋಣೆಗೆ ಪ್ರವೇಶಿಸಿದನು. ಅದರ ಬಾಗಿಲಿನ ಇಕ್ಕೆಡೆಗಳಲ್ಲಿರುವ ಗೋಡೆಗಳನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಎರಡು ಮೊಳ ದಪ್ಪವಾಗಿದ್ದು ಏಳು ಮೊಳ ಅಗಲವಾಗಿದ್ದವು. ದ್ವಾರವು ಆರು ಮೊಳ ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ, ಮಹಾಪರಿಶುದ್ಧ ಸ್ಥಳದ ಕಂಬಗಳನ್ನು ಅಳತೆ ಮಾಡಲು ದ್ವಾರದ ಒಂದೊಂದು ಕಂಬದ ಅಗಲ ಎರಡೆರಡು ಮೊಳಗಳೂ, ದ್ವಾರದ ಅಗಲವು ಆರು ಮೊಳಗಳೂ, ದ್ವಾರದ ಪಕ್ಕದ ಗೋಡೆಗಳ ಅಗಲವು ಏಳು ಮೊಳವೆಂದು ಅಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಮೇಲೆ ಆ ಪುರುಷ ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ ಗರ್ಭಗೃಹವನ್ನು ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಒಂದೊಂದು ಮೀಟರ್, ದ್ವಾರದ ಅಗಲ ಮೂರು ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಅವನು ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ [ಗರ್ಭಗೃಹವನ್ನು] ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಎರಡೆರಡು ಮೊಳ, ದ್ವಾರದ ಅಗಲ ಆರು ಮೊಳ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಅವನು ಒಳಗೆ ಹೋಗಿ ಪರಿಶುದ್ಧಸ್ಥಳದ ಪ್ರವೇಶದ್ವಾರದ ಕಂಬಗಳನ್ನು ಅಳೆದನು; ಒಂದೊಂದು ಕಂಬವು ಸುಮಾರು ಒಂದು ಮೀಟರ್ ಅಗಲವಿತ್ತು. ಪ್ರವೇಶದ್ವಾರವು ಸುಮಾರು ಮೂರು ಮೀಟರ್ ಅಗಲವಾಗಿತ್ತು ಮತ್ತು ಅದರ ಎರಡೂ ಬದಿಯ ಗೋಡೆಯು ಸುಮಾರು ನಾಲ್ಕು ಮೀಟರ್ ಅಗಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:3
3 ತಿಳಿವುಗಳ ಹೋಲಿಕೆ  

ಪ್ರತೀ ಕಾವಲು ಮನೆಯ ಮೇಲ್ಗಡೆ ಸಣ್ಣ ಕಿಟಕಿಗಳು, ಗೋಡೆ ಮತ್ತು ಜಗಲಿಗಳು ಇದ್ದವು. ಕಿಟಕಿಯ ಅಗಲದ ಭಾಗವು ಪ್ರವೇಶದ್ವಾರಕ್ಕೆ ಮುಖ ಮಾಡಿದ್ದವು. ಪ್ರವೇಶದ್ವಾರದ ಎರಡೂ ಪಕ್ಕದಲ್ಲಿದ್ದ ಗೋಡೆಗಳ ಮೇಲೆ ಖರ್ಜೂರ ವೃಕ್ಷದ ಚಿತ್ರವನ್ನು ಕೆತ್ತಲಾಗಿತ್ತು.


ಆಮೇಲೆ ಅವನು ಆಲಯದ ಕೈಸಾಲೆಗೆ ನನ್ನನ್ನು ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿಯೂ ಇರುವ ಗೋಡೆಗಳನ್ನು ಅವನು ಅಳತೆ ಮಾಡಲಾಗಿ ಗೋಡೆಯು ಐದು ಮೊಳ ದಪ್ಪ, ಮೂರು ಮೊಳ ಅಗಲವಾಗಿತ್ತು. ಅದರ ಮಧ್ಯದ ಸ್ಥಳ ಹದಿನಾಲ್ಕು ಮೊಳವಿತ್ತು.


ಆಮೇಲೆ ಅವನು ನನ್ನನ್ನು ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನ್ನು ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು