Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:13 - ಪರಿಶುದ್ದ ಬೈಬಲ್‌

13 ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣ ಕೋಣೆಗಳು ಪರಿಶುದ್ಧವಾಗಿವೆ. ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ತಿನ್ನುವರು ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞದ್ರವ್ಯ, ಪ್ರಾಯಶ್ಚಿತ್ತ ಯಜ್ಞದ್ರವ್ಯ ಎಂಬ ಮಹಾಪರಿಶುದ್ಧ ಪದಾರ್ಥಗಳನ್ನು ಅದರಲ್ಲಿ ಇಡುವರು. ಆ ಸ್ಥಳವು ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವನು ನನಗೆ - ದೀಕ್ಷಿತರ ಪ್ರಾಕಾರದ ಬಡಗಣ ತೆಂಕಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾಗಿವೆ; ಅಲ್ಲಿ ಯೆಹೋವನ ಸನ್ನಿಧಿ ಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುವರು, ಮತ್ತು ಧಾನ್ಯನೈವೇದ್ಯ, ದೋಷಪರಿಹಾರಕಯಜ್ಞದ್ರವ್ಯ, ಪ್ರಾಯಶ್ಚಿತ್ತಯಜ್ಞದ್ರವ್ಯ ಎಂಬೀ ಮಹಾಪರಿಶುದ್ಧಪದಾರ್ಥಗಳನ್ನು ಅಲ್ಲಿಡುವರು; ಆ ಸ್ಥಳವು ಪರಿಶುದ್ಧವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:13
27 ತಿಳಿವುಗಳ ಹೋಲಿಕೆ  

ಮೋಶೆ, “ನೀವು ಹೋತದ ಮಾಂಸವನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿತ್ತು. ಅದು ಬಹಳ ಪವಿತ್ರವಾದದ್ದಲ್ಲವೇ? ನೀವು ಯಾಕೆ ಅದನ್ನು ಯೆಹೋವನ ಸನ್ನಿಧಿಯಲ್ಲಿ ತಿನ್ನಲಿಲ್ಲ? ನೀವು ಜನರ ಪಾಪಪರಿಹಾರ ಮಾಡುವಂತೆಯೂ ಜನರ ದೋಷವನ್ನು ಪರಿಹಾರಮಾಡುವಂತೆಯೂ ಯೆಹೋವನು ಅದನ್ನು ನಿಮಗೆ ಕೊಟ್ಟನು.


“ಯಾಜಕನಾಗಿರುವ ಪ್ರತಿಯೊಬ್ಬನು ದೋಷಪರಿಹಾರಕ ಯಜ್ಞಮಾಂಸವನ್ನು ತಿನ್ನಬಹುದು. ಅದು ಬಹು ಪವಿತ್ರವಾಗಿರುವುದರಿಂದ ಅದನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕು.


ಆದರೆ ಉತ್ತರಕ್ಕೆ ಅಭಿಮುಖವಾಗಿರುವ ಕೋಣೆಯು ಯಜ್ಞವೇದಿಯಲ್ಲಿ ಕಾರ್ಯವಹಿಸುತ್ತಿರುವ ಯಾಜಕರಿಗಾಗಿ, ಯಾಜಕರೆಲ್ಲರೂ ಲೇವಿ ಕುಲದವರಾಗಿದ್ದಾರೆ. ಎರಡನೇ ಗುಂಪಿನ ಯಾಜಕರು ಚಾದೋಕನ ಸಂತತಿಯವರಾಗಿದ್ದರು. ಅವರು ಮಾತ್ರವೇ ಯಜ್ಞವೇದಿಯಲ್ಲಿ ಯಜ್ಞಾರ್ಪಣೆ ಮಾಡಬಹುದು” ಎಂದು ಹೇಳಿದನು.


ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.


“ಯಾಜಕನ ಕುಟುಂಬದಲ್ಲಿರುವ ಯಾವ ಪುರುಷನಾದರೂ ಪಾಪಪರಿಹಾರಕ ಯಜ್ಞದ ಮಾಂಸವನ್ನು ತಿನ್ನಬಹುದು. ಅದು ಬಹಳ ಪವಿತ್ರವಾಗಿದೆ.


“ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು.


ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.


ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ಈ ಪ್ರವೇಶ ದ್ವಾರವು ಪ್ರಾಕಾರದ ಬದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು.


ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.


ಕೋರಹ ಮತ್ತು ಅವನ ಹಿಂಬಾಲಕರೆಲ್ಲರಿಗೆ ಹೇಳಿದ್ದೇನೆಂದರೆ: “ನಾಳೆ ಮುಂಜಾನೆ ಯಾವನು ತನ್ನವನೆಂದು ಮತ್ತು ಪವಿತ್ರನೆಂದು ಯೆಹೋವನು ತೋರಿಸುವನು. ತಾನು ಆರಿಸಿಕೊಂಡವನನ್ನು ಯೆಹೋವನು ತನ್ನ ಹತ್ತಿರ ಬರಮಾಡಿಕೊಳ್ಳುವನು.


ಅವನು ಯಾಜಕರ ಕುಟುಂಬದವನಾಗಿರುವುದರಿಂದ ಪರಿಶುದ್ಧ ರೊಟ್ಟಿಯನ್ನೂ ಮಹಾಪರಿಶುದ್ಧ ರೊಟ್ಟಿಯನ್ನೂ ತಿನ್ನಬಹುದು.


“ದೋಷಪರಿಹಾರಕ ಯಜ್ಞದ ನಿಯಮಗಳು: ಅದು ಪವಿತ್ರವಾದದ್ದು.


ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ.


ಧಾನ್ಯಸಮರ್ಪಣೆಯಲ್ಲಿ ಉಳಿದ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿವೆ. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ಸಮರ್ಪಣೆಯು ಮಹಾಪರಿಶುದ್ಧವಾಗಿದೆ.


ಈ ದ್ವಾರದ ಕೈಸಾಲೆಗೆ ಮುಖಮಾಡಿ ಬಾಗಿಲಿದ್ದ ಒಂದು ಕೋಣೆಯಿತ್ತು. ಇದು ಯಾಜಕರು ಸರ್ವಾಂಗಹೋಮದ ಪ್ರಾಣಿಗಳನ್ನು ತೊಳೆಯುವ ಸ್ಥಳವಾಗಿತ್ತು.


ಆಲಯದ ಪಶ್ಚಿಮ ಭಾಗದ ಕಿರಿದಾದ ಸ್ಥಳದಲ್ಲಿ ಒಂದು ಕಟ್ಟಡವಿತ್ತು. ಇದು ಎಪ್ಪತ್ತು ಮೊಳ ಅಗಲವಾಗಿದ್ದು ತೊಂಭತ್ತು ಮೊಳ ಉದ್ದವಾಗಿತ್ತು. ಅದರ ಸುತ್ತಲಿನ ಗೋಡೆಯು ಐದು ಮೊಳ ದಪ್ಪವಾಗಿತ್ತು.


ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು