14 ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”
14 ಯಾಜಕರು ಪರಿಶುದ್ಧ ಸ್ಥಳವನ್ನು ಪ್ರವೇಶಿಸಿದ ಮೇಲೆ, ಅದನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವು ಪರಿಶುದ್ಧವೇ. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಸಾಮಾನ್ಯ ಜನರ ಅಂಗಳಕ್ಕೆ ಬರಬೇಕು” ಎಂದನು.
14 ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.
14 ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.
ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.
ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”
“ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು.
ಅವನು ತನ್ನ ಶರೀರವನ್ನು ಪವಿತ್ರಸ್ಥಳದಲ್ಲಿ ನೀರಿನಿಂದ ತೊಳೆದುಕೊಳ್ಳುವನು. ಬಳಿಕ ಅವನು ತನ್ನ ಇತರ ವಿಶೇಷ ಬಟ್ಟೆಗಳನ್ನು ಧರಿಸಿಕೊಳ್ಳುವನು. ಅವನು ಹೊರಗೆ ಬಂದು, ತನ್ನ ಸರ್ವಾಂಗಹೋಮವನ್ನು ಮತ್ತು ಜನರ ಸರ್ವಾಂಗಹೋಮವನ್ನು ಅರ್ಪಿಸುವನು. ಅವನು ತನಗಾಗಿಯೂ ಜನರಿಗಾಗಿಯೂ ಪ್ರಾಯಶ್ಚಿತ್ತ ಮಾಡುವನು.