ಯೆಹೆಜ್ಕೇಲನು 42:20 - ಪರಿಶುದ್ದ ಬೈಬಲ್20 ಆಲಯದ ಸುತ್ತಲೂ ಇದ್ದ ನಾಲ್ಕು ಗೋಡೆಗಳನ್ನು ಅಳೆದನು. ಆ ಗೋಡೆ ಐನೂರು ಮೊಳ ಉದ್ದವಿದ್ದು ಐನೂರು ಮೊಳ ಅಗಲವಿತ್ತು. ಅದು ಪವಿತ್ರಸ್ಥಳವನ್ನೂ ಬೇರೆ ಸ್ಥಳವನ್ನೂ ಬೇರ್ಪಡಿಸಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಲಯವನ್ನು ನಾಲ್ಕು ಕಡೆಗಳಲ್ಲಿಯೂ ಅಳೆದನು. ಪವಿತ್ರವಾದ ಮತ್ತು ಅಪವಿತ್ರವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರು ಕೋಲು ಉದ್ದವಾದ ಮತ್ತು ಐನೂರು ಕೋಲು ಅಗಲವಾದ ಗೋಡೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವದಕ್ಕೆ ಐನೂರಳತೇ ಕೋಲುದ್ದದ ಐನೂರಳತೇ ಕೋಲಗಲದ ಗೋಡೆಯು ಸುತ್ತುಮುತ್ತಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅವನು ನಾಲ್ಕು ಕಡೆಗಳಿಂದ ಅಳೆದನು. ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಸ್ಥಳವನ್ನೂ ಪ್ರತ್ಯೇಕಪಡಿಸುವ ಹಾಗೆ ಅದಕ್ಕೆ ಸುತ್ತಲು ಸುಮಾರು 265 ಮೀಟರ್ ಉದ್ದ ಮತ್ತು ಸುಮಾರು 265 ಮೀಟರ್ ಗೋಡೆ ಇತ್ತು. ಅಧ್ಯಾಯವನ್ನು ನೋಡಿ |
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.