Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:4 - ಪರಿಶುದ್ದ ಬೈಬಲ್‌

4 ಇದರ ಪ್ರವೇಶ ದ್ವಾರವು ಉತ್ತರ ದಿಕ್ಕಿನಲ್ಲಿದ್ದಾಗ್ಯೂ, ಹತ್ತು ಮೊಳ ಅಗಲ, ನೂರು ಮೊಳ ಉದ್ದದ ದಾರಿಯು ಆ ಕಟ್ಟಡದ ದಕ್ಷಿಣ ಭಾಗದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆ ಸಾಲುಗಳ ನಡುವೆ ನೂರು ಮೊಳ ಉದ್ದದ ಹತ್ತು ಮೊಳ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಬಡಗಲ ಕಡೆಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:4
5 ತಿಳಿವುಗಳ ಹೋಲಿಕೆ  

ಬಳಿಕ ಆ ಪುರುಷನು ನನ್ನನ್ನು ಮಹಾದ್ವಾರದ ಪಕ್ಕದಲ್ಲಿನ ಪ್ರವೇಶಮಾರ್ಗವಾಗಿ ಉತ್ತರದಲ್ಲಿರುವ ಯಾಜಕರ ಪವಿತ್ರ ಕೋಣೆಗಳಿಗೆ ಕರೆದುಕೊಂಡು ಹೋದನು.


“ಸ್ವರ್ಗಕ್ಕೆ ನಡೆಸುವ ಕಿರಿದಾದ ಬಾಗಿಲಿನ ಮೂಲಕ ಹೋಗಲು ಪ್ರಯಾಸಪಡಿರಿ! ಅನೇಕ ಜನರು ಅದರ ಮೂಲಕ ಹೋಗಲು ಪ್ರಯತ್ನಿಸುತ್ತಾರೆ. ಆದರೆ ಅವರಿಂದ ಆಗುವುದಿಲ್ಲ.


ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.


ಆಮೇಲೆ ಆ ಮನುಷ್ಯನು ನನ್ನನ್ನು ಉತ್ತರದ್ವಾರದ ಮೂಲಕ ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅವನು ನನ್ನನ್ನು ಪಶ್ಚಿಮದಲ್ಲಿರುವ ಅನೇಕ ಕೋಣೆಗಳಿದ್ದ ಕಟ್ಟಡಕ್ಕೆ ಕರೆದುಕೊಂಡು ಹೋದನು. ಅದು ಇಕ್ಕಟ್ಟಾದ ಸ್ಥಳದ ಪಶ್ಚಿಮದಲ್ಲಿತ್ತು ಮತ್ತು ಕಟ್ಟಡವು ಉತ್ತರ ಭಾಗದಲ್ಲಿತ್ತು.


ಈ ಕೋಣೆಗಳ ಎದುರಿನಲ್ಲಿ ದಾರಿಯು ಇತ್ತು. ಇದು ಉತ್ತರ ದಿಕ್ಕಿನಲ್ಲಿದ್ದ ಕೋಣೆಗಳಂತೆ ಇತ್ತು. ಅವುಗಳ ಅಳತೆಯೂ ಬಾಗಿಲು ಕದಗಳ ವಿನ್ಯಾಸವೂ ಒಂದೇ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು