Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 42:5 - ಪರಿಶುದ್ದ ಬೈಬಲ್‌

5-6 ಈ ಕಟ್ಟಡವು ಮೂರು ಅಂತಸ್ತು ಎತ್ತರವಿದ್ದಾಗ್ಯೂ ಇದಕ್ಕೆ ಹೊರಗಿನ ಪ್ರಾಕಾರಕ್ಕೆ ಇದ್ದಂತೆ ಸ್ತಂಭಗಳಿರಲಿಲ್ಲ. ಮೇಲಿನ ಅಂತಸ್ತಿನ ಕೋಣೆಗಳು, ಮಧ್ಯ ಮತ್ತು ಕೆಳಗಿನ ಅಂತಸ್ತುಗಳ ಕೋಣೆಗಳಿಂದ ಹಿಂದಕ್ಕೆ ಇದ್ದವು. ಮೇಲಿನಂತಸ್ತು, ಮಧ್ಯ ಅಂತಸ್ತಿಗಿಂತ ಕಿರಿದಾಗಿತ್ತು. ಮತ್ತು ಮಧ್ಯ ಅಂತಸ್ತು ಕೆಳಗಿನ ಅಂತಸ್ತಿಗಿಂತ ಅಗಲದಲ್ಲಿ ಕಿರಿದಾಗಿತ್ತು. ಯಾಕೆಂದರೆ ಮೇಲಂತಸ್ತುಗಳು ಆ ಜಾಗವನ್ನು ಆಕ್ರಮಿಸಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೇಲಿನ ಕೋಣೆಗಳು, ಮಧ್ಯದ ಮತ್ತು ಕೆಳಗಿನ ಕೋಣೆಗಳಿಗಿಂತ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಮಧ್ಯದ ಮತ್ತು ಕೆಳಗಿನ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು. ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು; ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಈಗ ಮೇಲಿನ ಕೊಠಡಿಗಳೇ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮತ್ತು ಮಧ್ಯ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 42:5
4 ತಿಳಿವುಗಳ ಹೋಲಿಕೆ  

ಪ್ರತಿ ಅಂತಸ್ತು ಅದರ ಕೆಳಗಿನ ಅಂತಸ್ತಿಗಿಂತ ಅಗಲವಾಗಿದ್ದವು. ಆಲಯದ ಸುತ್ತ ಇದ್ದ ಕೋಣೆಗಳ ಗೋಡೆಗಳು ಮೇಲಕ್ಕೆ ಹೋದಂತೆ ಕಿರಿದಾಗಿದ್ದವು. ಹೀಗೆ ಕೊನೆ ಅಂತಸ್ತಿನ ಕೋಣೆಗಳು ಕೆಳಗಣ ಕೋಣೆಗಳಿಗಿಂತ ಹೆಚ್ಚು ಅಗಲವಾಗಿದ್ದವು. ಮಧ್ಯ ಅಂತಸ್ತಿನ ಮೂಲಕ ಒಂದು ನಿಚ್ಚಣಿಕೆಯು ಕೆಳಗಿನ ಅಂತಸ್ತಿನಿಂದ ಕೊನೆಯ ಅಂತಸ್ತಿನವರೆಗೆ ಹೋಗಿತ್ತು.


ಆಲಯದ ಹಿಂಭಾಗದಲ್ಲಿದ್ದ ನಿಯಮಿತದ ಸ್ಥಳದಲ್ಲಿ ಕಟ್ಟಿದ್ದ ಕಟ್ಟಡದ ಉದ್ದವನ್ನು ಅವನು ಲೆಕ್ಕ ಮಾಡಿದನು. ಅದು ಗೋಡೆಯಿಂದ ಗೋಡೆಗೆ ನೂರು ಮೊಳವಿತ್ತು. ಪವಿತ್ರಸ್ಥಳ, ಮಹಾ ಪವಿತ್ರಸ್ಥಳ ಮತ್ತು ಒಳಗಿನ ಪ್ರಾಕಾರಕ್ಕೆ ಮುಖಮಾಡಿದ್ದ ಕೈಸಾಲೆಯ


ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಿನ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು