ಯೆಹೆಜ್ಕೇಲನು 43:10 - ಪರಿಶುದ್ದ ಬೈಬಲ್10 “ಈಗ, ನರಪುತ್ರನೇ, ಇಸ್ರೇಲ್ ಜನಾಂಗದವರಿಗೆ ಆಲಯದ ವಿಚಾರವಾಗಿ ತಿಳಿಸು. ಆಲಯದ ವಿನ್ಯಾಸದ ಬಗ್ಗೆ ಅವರು ತಿಳಿದಾಗ ತಮ್ಮ ಪಾಪಗಳಿಗಾಗಿ ಅವರು ನಾಚಿಕೆಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ಆಲಯವನ್ನು ಅವರಿಗೆ ತೋರಿಸು ಮತ್ತು ಅವರು ಅದನ್ನು ಅಳತೆ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ. ಅಧ್ಯಾಯವನ್ನು ನೋಡಿ |
ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.
ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.