ಯೆಹೆಜ್ಕೇಲನು 43:12 - ಪರಿಶುದ್ದ ಬೈಬಲ್12 ಇದು ಆಲಯದ ಕಟ್ಟಳೆ: ಪರ್ವತದ ಮೇಲಿನ ಎಲ್ಲಾ ಪ್ರಾಂತ್ಯದ ಮೇರೆಯೊಳಗಿರುವ ಸ್ಥಳವು ಅತಿ ಪರಿಶುದ್ಧವಾದದ್ದು. ಇದು ಆಲಯದ ಕಟ್ಟಳೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಎತ್ತರವಾದ ನನ್ನ ಪವಿತ್ರಪರ್ವತಕ್ಕೆ ಜನರು ಬರಲೇಬೇಕು. ಅಲ್ಲಿ ಅವರು ನನ್ನ ಸೇವೆ ಮಾಡಲೇಬೇಕು. ಇಡೀ ಇಸ್ರೇಲ್ ಜನಾಂಗವು ತಮ್ಮ ದೇಶದಲ್ಲಿರುವುದು. ಅಲ್ಲಿ ನಾನು ಅವರನ್ನು ಸ್ವೀಕರಿಸಿಕೊಳ್ಳುವೆನು. ಅಲ್ಲಿ ನೀವು ನಿಮ್ಮ ಕಾಣಿಕೆಗಳನ್ನು ಪ್ರಥಮ ಫಲಗಳನ್ನು ಮತ್ತು ಎಲ್ಲಾ ಪವಿತ್ರ ಕಾಣಿಕೆಗಳನ್ನು ನನಗೆ ತರಬೇಕೆಂದು ಅಪೇಕ್ಷಿಸುತ್ತೇನೆ.