Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:15 - ಪರಿಶುದ್ದ ಬೈಬಲ್‌

15 ಯಜ್ಞವೇದಿಯ ಮೇಲೆ ಬೆಂಕಿ ಹಾಕುವ ಸ್ಥಳದ ಎತ್ತರ ನಾಲ್ಕು ಮೊಳ. ಅದರ ನಾಲ್ಕು ಮೂಲೆಗಳು ಕೊಂಬಿನ ಆಕಾರದಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹೋಮಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹೋಮಕುಂಡದ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:15
9 ತಿಳಿವುಗಳ ಹೋಲಿಕೆ  

ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.


ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.


ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.


ಅರೀಯೇಲ್ ವಿರುದ್ಧವಾಗಿ ಅನೇಕಾನೇಕ ಜನಾಂಗಗಳು ಯುದ್ಧಮಾಡಿದರು. ಅವೆಲ್ಲಾ ರಾತ್ರಿಕಾಲದ ಭಯಂಕರ ಕನಸುಗಳಂತೆ ಇದ್ದವು. ಸೈನ್ಯವು ಅರೀಯೇಲ್‌ಗೆ ಮುತ್ತಿಗೆ ಹಾಕಿ ಅದನ್ನು ಶಿಕ್ಷಿಸಿದವು.


ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.


ಅದೋನೀಯನೂ ಹೆದರಿಕೊಂಡು ಯಜ್ಞವೇದಿಕೆಯ ಬಳಿಗೆ ಹೋಗಿ, ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.


“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು