Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:17 - ಪರಿಶುದ್ದ ಬೈಬಲ್‌

17 ಅದರ ಮೆಟ್ಟಲು ಹದಿನಾಲ್ಕು ಮೊಳ ಅಗಲ, ಹದಿನಾಲ್ಕು ಮೊಳ ಉದ್ದವಾಗಿದ್ದು ಚೌಕವಾಗಿತ್ತು. ಅದರ ಸುತ್ತಲೂ ಇದ್ದ ಅಂಚು ಅರ್ಧ ಮೊಳ ಅಗಲವಾಗಿತ್ತು. (ಅಡಿಪಾಯದ ಸುತ್ತಲೂ ಇದ್ದ ಕಾಲುವೆಯ ಅಗಲ ಎರಡು ಮೊಳ.) ಯಜ್ಞವೇದಿಯ ಮೇಲೆ ಹತ್ತುವ ಮೆಟ್ಟಲುಗಳು ಪೂರ್ವಭಾಗದಲ್ಲಿದ್ದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ, ನಾಲ್ಕು ಕಡೆಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ, ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಅಭಿಮುಖವಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೊಡ್ಡ ಅಂತಸ್ತು ಏಳು ಮೀಟರ್ ಉದ್ದವಾಗಿಯೂ ಏಳು ಮೀಟರ್ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಕೆಳಭಾಗದ ಸುತ್ತಣ ಅಂಚಿನ ಅಗಲವು ಐವತ್ತು ಸೆಂಟಿಮೀಟರ್; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೊಡ್ಡ ಅಂತಸ್ತು ಹದಿನಾಲ್ಕು ಮೊಳ ಉದ್ದವಾಗಿಯೂ ಹದಿನಾಲ್ಕು ಮೊಳ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಅರ್ಧ ಮೊಳ; ಕೆಳಭಾಗದ ಸುತ್ತಣ ಅಂಚಿನ ಅಗಲವು ಒಂದು ಮೊಳ; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:17
11 ತಿಳಿವುಗಳ ಹೋಲಿಕೆ  

ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”


ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.


ಎಲೀಯನು ಯೆಹೋವನ ಗೌರವಾರ್ಥವಾಗಿ ಯಜ್ಞವೇದಿಕೆಯನ್ನು ಈ ಕಲ್ಲುಗಳಿಂದ ಸರಿಪಡಿಸಿದನು. ಎಲೀಯನು ಯಜ್ಞವೇದಿಕೆಯ ಸುತ್ತಲೂ ಹಳ್ಳವನ್ನು ತೋಡಿದನು. ಅದು ಹದಿನೈದು ಲೀಟರ್ ನೀರು ತುಂಬುವಷ್ಟು ಅಗಲವಾಗಿತ್ತು ಮತ್ತು ಆಳವಾಗಿತ್ತು.


ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.


ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು.


ಬಳಿಕ ಮೇಜಿನ ಸುತ್ತಲೂ ಮೂರು ಇಂಚು ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.


ನೆಲದಿಂದ ಅಡಿಪಾಯದ ತಳದವರೆಗೆ ಅಡಿಪಾಯದ ಎತ್ತರ ಎರಡು ಮೊಳ, ಅದರ ಅಗಲ ಒಂದು ಮೊಳ, ಚಿಕ್ಕ ಸಜ್ಜದಿಂದ ದೊಡ್ಡ ಸಜ್ಜದವರೆಗೆ ನಾಲ್ಕು ಮೊಳ ಎತ್ತರ, ಎರಡು ಮೊಳ ಅಗಲ.


“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


ಪಾಪಪರಿಹಾರಕಯಜ್ಞಕ್ಕೆ ಬಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಅದನ್ನು ಆಲಯದ ಬಾಗಿಲಿನ ನಿಲುವು ಕಂಬಗಳಿಗೂ, ಯಜ್ಞವೇದಿಕೆಯ ಸಜ್ಜದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದ್ವಾರದ ಎರಡು ನಿಲುವು ಕಂಬಗಳಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು