ಯೆಹೆಜ್ಕೇಲನು 43:20 - ಪರಿಶುದ್ದ ಬೈಬಲ್20 “ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಸುತ್ತಣ ದಿಂಡಿಗೂ ಹಚ್ಚಿ ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ. ಅಧ್ಯಾಯವನ್ನು ನೋಡಿ |