Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 43:26 - ಪರಿಶುದ್ದ ಬೈಬಲ್‌

26 ಏಳು ದಿವಸಗಳ ತನಕ ಯಾಜಕರು ವೇದಿಯನ್ನು ಪವಿತ್ರ ಮಾಡಬೇಕು ಮತ್ತು ದೇವರನ್ನು ಆರಾಧಿಸುವದಕ್ಕೆ ಸಿದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಹೀಗೆ ಏಳು ದಿವಸ ಬಲಿಪೀಠದ ದೋಷವನ್ನು ಪರಿಹರಿಸುತ್ತಾ, ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಹೀಗೆ ಏಳು ದಿವಸ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 43:26
9 ತಿಳಿವುಗಳ ಹೋಲಿಕೆ  

ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.


ಆಗ ಮೋಶೆಯು ಅವರಿಗೆ, “ಇಂದು ನೀವು ಯೆಹೋವನಿಗೆ ಮೀಸಲಾದ ಜನರಾದಿರಿ; ಯಾಕೆಂದರೆ ನೀವು ನಿಮ್ಮ ಸ್ವಂತ ಗಂಡುಮಗನಿಗೂ ಸಹೋದರನಿಗೂ ವಿರೋಧವಾದಿರಿ. ಇಂದು ಆತನು ನಿಮ್ಮನ್ನು ಆಶೀರ್ವದಿಸಿದ್ದಾನೆ” ಅಂದನು.


ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.


“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


“ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಬೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು.


ದೋಷಪರಿಹಾರಕಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಬೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.


ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು.


ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು