ಯೆಹೆಜ್ಕೇಲನು 43:27 - ಪರಿಶುದ್ದ ಬೈಬಲ್27 ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಿಂದ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.
ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”