Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:1 - ಪರಿಶುದ್ದ ಬೈಬಲ್‌

1 ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ತಿರುಗಿ ಕರೆದುಕೊಂಡು ಬಂದನು. ಅದು ಮುಚ್ಚಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಆ ಪುರುಷನು ನನ್ನನ್ನು ಪವಿತ್ರಾಲಯದ ಮೂಡಣ ಹೊರಗಣ ಹೆಬ್ಬಾಗಿಲಿಗೆ ಪುನಃ ಕರತಂದನು; ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:1
12 ತಿಳಿವುಗಳ ಹೋಲಿಕೆ  

ಆ ಮನುಷ್ಯನು ನನ್ನನ್ನು ಪೂರ್ವದ ದ್ವಾರಕ್ಕೆ ಕರೆದುಕೊಂಡು ಹೋದನು.


ಈ ಪವಿತ್ರಸ್ಥಳಕ್ಕೆ ಪ್ರವೇಶಿಸುವ ಯಾಜಕರು ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲಿಯೇ ತೆಗೆದಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಬೇಕು. ಯಾಕೆಂದರೆ ಆ ವಸ್ತುಗಳು ಪವಿತ್ರವಾದದ್ದು. ಒಬ್ಬ ಯಾಜಕನು ಇತರ ಜನರು ಇರುವ ಸ್ಥಳಕ್ಕೆ ಹೋಗಬೇಕಿದ್ದಲ್ಲಿ ಅವನು ಕೋಣೆಗೆ ಬಂದು ದೀಕ್ಷಾವಸ್ತ್ರಗಳನ್ನು ತೆಗೆದಿಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಹೋಗಬೇಕು.”


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ಅವನು ಪೂರ್ವದ ದ್ವಾರಕ್ಕೆ ಹೋದನು. ಅವನು ಅದರ ಮೆಟ್ಟಿಲುಗಳ ಬಳಿಗೆ ಹೋಗಿ ದ್ವಾರದ ಅಗಲವನ್ನು ಅಳತೆಮಾಡಿದನು. ಅದು ಒಂದು ಅಳತೆಕೋಲು ಅಗಲವಾಗಿತ್ತು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


ಯೆಹೋವನ ಮಹಿಮೆಯು ಪೂರ್ವದಿಕ್ಕಿನ ದ್ವಾರದ ಮೂಲಕ ಆಲಯದೊಳಗೆ ಬಂದಿತು.


ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು.


ಯೆಹೋಷಾಫಾಟನು ದೇವಾಲಯದ ಹೊಸ ಅಂಗಳದಲ್ಲಿ ಕೂಡಿಬಂದ ಜನರೆದುರು ಎದ್ದುನಿಂತು,


ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾಅಂಗಳವನ್ನೂ ಮಹಾಅಂಗಳಕ್ಕೆ ಬಾಗಿಲುಗಳನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಲಾಗಿದ್ದವು.


ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು