ಯೆಹೆಜ್ಕೇಲನು 44:10 - ಪರಿಶುದ್ದ ಬೈಬಲ್10 ಗತಕಾಲದಲ್ಲಿ ಇಸ್ರೇಲರು ನನ್ನನ್ನು ತ್ಯಜಿಸಿದಾಗ ಲೇವಿಯರು ನನ್ನನ್ನು ಬಿಟ್ಟುಹೋದರು. ಇಸ್ರೇಲರು ನನ್ನನ್ನು ಬಿಟ್ಟು ವಿಗ್ರಹಗಳನ್ನು ಪೂಜಿಸಿದರು. ಲೇವಿಯರು ಮಾಡಿದ ಪಾಪಕ್ಕಾಗಿ ಶಿಕ್ಷಿಸಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು. ಅಧ್ಯಾಯವನ್ನು ನೋಡಿ |
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
“ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ.