ಯೆಹೆಜ್ಕೇಲನು 44:15 - ಪರಿಶುದ್ದ ಬೈಬಲ್15 “ಯಾಜಕರೆಲ್ಲರೂ ಲೇವಿ ಕುಲಕ್ಕೆ ಸಂಬಂಧಪಟ್ಟವರು. ಆದರೆ ಲೇವಿಯರು ನನ್ನನ್ನು ಬಿಟ್ಟು ತೊಲಗಿದಾಗ ಚಾದೋಕನ ಸಂತತಿಯವರಾದ ಯಾಜಕರು ನನ್ನ ಪವಿತ್ರ ಸ್ಥಳವನ್ನು ಪರಾಂಬರಿಸಿದರು. ಆದ್ದರಿಂದ ಚಾದೋಕನ ಸಂತತಿಯವರು ಮಾತ್ರ ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವರು ನನ್ನ ಸನ್ನಿಧಿಯಲ್ಲಿ ನಿಂತು ಯಜ್ಞಮಾಡಲ್ಪಡುವ ಪ್ರಾಣಿಗಳ ಕೊಬ್ಬು ಮತ್ತು ರಕ್ತವನ್ನು ನನಗೆ ಸಮರ್ಪಿಸುವರು.” ಇದು ನನ್ನ ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |
ನೀವು ನನ್ನ ಆಲಯದೊಳಗೆ ಅನ್ಯರನ್ನು ತಂದಿರುತ್ತೀರಿ. ಅವರು ಸುನ್ನತಿಯಾದವರಾಗಿರಲಿಲ್ಲ. ಅವರು ಸಂಪೂರ್ಣವಾಗಿ ನನ್ನನ್ನು ನಂಬಿರಲಿಲ್ಲ. ಈ ರೀತಿಯಾಗಿ ನೀವು ನನ್ನ ಆಲಯವನ್ನು ಹೊಲೆ ಮಾಡಿರುತ್ತೀರಿ. ನೀವು ನಾವು ಮಾಡಿಕೊಂಡ ಒಡಂಬಡಿಕೆಯನ್ನು ಮುರಿದುಬಿಟ್ಟಿರಿ. ಭಯಂಕರ ಕೃತ್ಯಗಳನ್ನು ಮಾಡಿ ಆಮೇಲೆ ನನಗೆ ರೊಟ್ಟಿ, ಕೊಬ್ಬು, ರಕ್ತಗಳ ಕಾಣಿಕೆ ಅರ್ಪಿಸುತ್ತೀರಿ. ಆದರೆ ಇವೆಲ್ಲಾ ನನ್ನ ಆಲಯವನ್ನು ಅಶುದ್ಧಗೊಳಿಸುತ್ತಿವೆ.
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”