ಯೆಹೆಜ್ಕೇಲನು 44:17 - ಪರಿಶುದ್ದ ಬೈಬಲ್17 ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಅವರು ಒಳಗಿನ ಅಂಗಳದ ಬಾಗಿಲುಗಳನ್ನು ಪ್ರವೇಶಿಸುವಾಗ, ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ, ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಒಳಗಣ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಬಟ್ಟೆಗಳನ್ನು ಧರಿಸಿರಬೇಕು; ಒಳಗಣ ಪ್ರಾಕಾರದ ಬಾಗಿಲುಗಳಲ್ಲಿಯೂ ದೇವಸ್ಥಾನದಲ್ಲಿಯೂ ಸೇವೆಮಾಡುತ್ತಿರುವಾಗ ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು. ಅಧ್ಯಾಯವನ್ನು ನೋಡಿ |
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”