Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:18 - ಪರಿಶುದ್ದ ಬೈಬಲ್‌

18 ಅವರು ನಾರುಮಡಿಯ ಮುಂಡಾಸನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲಿ ಅವರು ಧರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:18
9 ತಿಳಿವುಗಳ ಹೋಲಿಕೆ  

ಆದರೆ ಪ್ರತಿಯೊಂದನ್ನೂ ಸರಿಯಾದ ರೀತಿಯಲ್ಲಿ ಮತ್ತು ಕ್ರಮಬದ್ಧವಾಗಿ ಮಾಡಿರಿ.


ರುಮಾಲುಗಳನ್ನು, ಸೊಂಟಪಟ್ಟಿಯನ್ನು, ಪರಿಮಳದ್ರವ್ಯವನ್ನು, ತಾಯಿತಿಗಳನ್ನು,


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ಮೌನವಾಗಿ ನರಳಾಡು. ನಿನ್ನ ಸತ್ತ ಹೆಂಡತಿಗಾಗಿ ಗಟ್ಟಿಯಾಗಿ ರೋಧಿಸಬೇಡ. ನೀನು ಯಾವಾಗಲೂ ತೊಡುವ ಬಟ್ಟೆಯನ್ನು ತೊಟ್ಟುಕೋ. ಮುಂಡಾಸವನ್ನು ಕಟ್ಟಿಕೋ. ಕಾಲಿಗೆ ಕೆರವನ್ನು ಮೆಟ್ಟಿಕೋ, ನಿನ್ನ ದುಃಖವನ್ನು ತೋರಿಸಲು ಮೀಸೆಯನ್ನು ಮುಚ್ಚಿಕೊಳ್ಳಬೇಡ. ಮರಣದ ಊಟವನ್ನು ಮಾಡದಿರು.”


ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು