19 ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಅವರು ಹೋಗುವಾಗ, ನನ್ನ ಸೇವೆಮಾಡಲು ಅವರು ಧರಿಸಿಕೊಂಡಿದ್ದ ವಸ್ತ್ರಗಳನ್ನು ತೆಗೆದಿಡುವರು. ಒಳಗಿನ ಪ್ರಾಕಾರದಲ್ಲಿರುವ ವಿಶೇಷವಾದ ಉಗ್ರಾಣ ಕೋಣೆಯಲ್ಲಿ ಅವರು ಆ ವಸ್ತ್ರಗಳನ್ನು ಇಡುವರು ಮತ್ತು ಹೊರಗಿನ ಪ್ರಾಕಾರದಲ್ಲಿರುವ ಜನರ ಬಳಿಗೆ ಹೋಗುವಾಗ ಬೇರೆ ಬಟ್ಟೆಗಳನ್ನು ಧರಿಸಿಕೊಳ್ಳುವರು. ಹೀಗೆ ಅವರು ಮಾಡುವದರಿಂದ ಸಾಮಾನ್ಯ ಜನರು ಆ ವಿಶೇಷವಾದ ಬಟ್ಟೆಗಳನ್ನು ಮುಟ್ಟಿದಂತಾಗುವುದು.
19 ಅವರು ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗುಲಿಸಿ, ಅವರನ್ನು ಪರಿಶುದ್ಧರನ್ನಾಗಿ ಮಾಡದಂತೆ. ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು, ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
19 ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.
19 ಅವರು ಹೊರಗಣ ಪ್ರಾಕಾರಕ್ಕೆ ಅಂದರೆ ಅಲ್ಲಿನ ಜನರ ಬಳಿಗೆ ಹೊರಡುವಾಗ ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗಮಾಡದಂತೆ ಅವುಗಳನ್ನು ತೆಗೆದು ಪರಿಶುದ್ಧವಾದ ಕೋಣೆಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಹಾಕಿಕೊಳ್ಳಲಿ.
19 ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.
ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”
ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.
ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.
“ಬಳಿಕ ಆರೋನನು ದೇವದರ್ಶನಗುಡಾರವನ್ನು ಪ್ರವೇಶಿಸುವನು. ಅವನು ಪವಿತ್ರಸ್ಥಳದೊಳಗೆ ಹೋಗಿದ್ದಾಗ ಧರಿಸಿಕೊಂಡಿದ್ದ ನಾರುಬಟ್ಟೆಯನ್ನು ತೆಗೆದುಹಾಕುವನು. ಅವನು ಈ ಬಟ್ಟೆಗಳನ್ನು ಅಲ್ಲಿಯೇ ಬಿಡಬೇಕು.
‘ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಮಾಂಸವನ್ನು ಒಯ್ಯುತ್ತಿದ್ದಾನೆಂದು ನೆನಸಿರಿ. ಆ ಮಾಂಸವು ಯಜ್ಞದ ಒಂದು ಭಾಗವಾಗಿದೆ. ಆದ್ದರಿಂದ ಅದು ಪವಿತ್ರವಾದದ್ದು. ಆ ಬಟ್ಟೆಯು ರೊಟ್ಟಿಯನ್ನಾಗಲಿ ಅಡಿಗೆ ಮಾಡಿದ ಆಹಾರವಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಮುಟ್ಟಿದರೆ ಮುಟ್ಟಿದ ವಸ್ತು ಪವಿತ್ರವಸ್ತುವಾಗಬಹುದೇ?’” ಯಾಜಕರು ಉತ್ತರವಾಗಿ, “ಇಲ್ಲ” ಎಂದರು.