Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:22 - ಪರಿಶುದ್ದ ಬೈಬಲ್‌

22 ಯಾಜಕರು ವಿಧವೆಯರನ್ನಾಗಲಿ ವಿವಾಹವಿಚ್ಛೇದನಗೊಂಡ ಸ್ತ್ರೀಯರನ್ನಾಗಲಿ ಮದುವೆಯಾಗಕೂಡದು. ಇಸ್ರೇಲ್ ಸಂತತಿಯವಳೇ ಆಗಿರುವ ಕನ್ನಿಕೆಯನ್ನಾಗಲಿ ಅಥವಾ ಯಾಜಕನಾಗಿದ್ದ ತನ್ನ ಗಂಡನನ್ನು ಕಳೆದುಕೊಂಡ ವಿಧವೆಯನ್ನಾಗಲಿ ಮದುವೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯಾಜಕರು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆ ಮಾಡಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್‍ವಂಶದ ಕನ್ಯೆಯನ್ನಾಗಲಿ ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:22
7 ತಿಳಿವುಗಳ ಹೋಲಿಕೆ  

“ಯಾಜಕನು ವಿಶೇಷವಾದ ರೀತಿಯಲ್ಲಿ ದೇವರ ಸೇವೆ ಮಾಡುತ್ತಾನೆ. ಆದ್ದರಿಂದ ಯಾಜಕನು ಬೇರೆಯವರೊಡನೆ ಲೈಂಗಿಕ ಸಂಬಂಧಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಯಾಜಕನು ವೇಶ್ಯೆಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಮದುವೆಯಾಗಬಾರದು.


ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.


ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು