23 “ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.
“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.
“ನನ್ನ ಜನರು ಅಜ್ಞಾನಿಗಳಾಗಿರುವುದರಿಂದ ಅವರು ನಾಶವಾಗುವರು, ನೀವು ಕಲಿಯಲು ನಿರಾಕರಿಸುತ್ತೀರಿ. ಆದ್ದರಿಂದ ನೀವು ನನ್ನ ಯಾಜಕರಾಗಿರಲು ನಾನು ನಿರಾಕರಿಸುತ್ತೇನೆ. ನಿಮ್ಮ ದೇವರ ಕಟ್ಟಳೆಗಳನ್ನು ನೀವು ಮರೆತುಬಿಟ್ಟಿರುವಿರಿ. ಆದ್ದರಿಂದ ನಾನು ನಿಮ್ಮ ಮಕ್ಕಳನ್ನು ಮರೆತುಬಿಡುವೆನು.
ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.
ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.