Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 44:27 - ಪರಿಶುದ್ದ ಬೈಬಲ್‌

27 ಅನಂತರ ಅವನು ಪವಿತ್ರಸ್ಥಳಕ್ಕೆ ತಿರುಗಿ ಹೋಗಬಹುದು. ಆದರೆ ಒಳಗಿನ ಪ್ರಾಕಾರದೊಳಗೆ ಹೋಗುವ ದಿನದಂದು ಯಾಜಕನು ಮೊದಲು ತನಗಾಗಿ ಪಾಪಪರಿಹಾರಕಯಜ್ಞವನ್ನು ಸಮರ್ಪಿಸಿಕೊಳ್ಳಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಣ ಪ್ರಾಕಾರಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 44:27
7 ತಿಳಿವುಗಳ ಹೋಲಿಕೆ  

ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.


“ಒಬ್ಬನು ಮತ್ತೊಬ್ಬನ ದೇಹದೊಳಗಿಂದ ಬರುವ ಯಾವುದಾದರೂ ಅಶುದ್ಧ ವಸ್ತುವನ್ನು ತಿಳಿಯದೆ ಮುಟ್ಟಿದರೂ, ತಿಳಿದುಬಂದಾಗ ಅವನು ದೋಷಿಯಾಗುವನು.


ಅವನು ದೋಷಪರಿಹಾರಕ್ಕಾಗಿ ಹೆಣ್ಣು ಕುರಿಮರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯಜ್ಞವಾಗಿ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು