ಯೆಹೆಜ್ಕೇಲನು 44:29 - ಪರಿಶುದ್ದ ಬೈಬಲ್29 ಜನರು ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞಕ್ಕೆ ತಂದ ಕಾಣಿಕೆಯೇ ಅವರ ಆಹಾರವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕ ಯಜ್ಞದ್ರವ್ಯವನ್ನೂ, ಪ್ರಾಯಶ್ಚಿತ್ತ ಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲರಲ್ಲಿ ಹರಕೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರು ಧಾನ್ಯನೈವೇದ್ಯವನ್ನೂ ದೋಷಪರಿಹಾರಕಯಜ್ಞದ್ರವ್ಯವನ್ನೂ ಪ್ರಾಯಶ್ಚಿತ್ತಯಜ್ಞದ್ರವ್ಯವನ್ನೂ ಅನುಭವಿಸಲಿ; ಕೇವಲ ಯೆಹೋವನದಾಗಿಯೇ ಇರಲೆಂದು ಇಸ್ರಾಯೇಲ್ಯರು ಹರಕೆಮಾಡಿಕೊಡುವದೆಲ್ಲವೂ ಅವರಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”