6 ಅನಂತರ ನನ್ನ ಮಾತಿಗೆ ವಿಧೇಯರಾಗಲು ನಿರಾಕರಿಸುವ ಎಲ್ಲಾ ಇಸ್ರೇಲರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ಇಸ್ರೇಲ್ ಜನಾಂಗವೇ, ನೀವು ಮಾಡಿರುವ ಭಯಂಕರ ಕೃತ್ಯಗಳು ನನಗೆ ಸಾಕಾಗಿವೆ.
6 ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ.
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದಿರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.
ಇದು ನನ್ನ ಒಡೆಯನಾದ ಯೆಹೋವನ ನುಡಿಗಳು: “ಇಸ್ರೇಲ್ ಜನರನ್ನು ಆಳುವವರೇ, ಅವರನ್ನು ಕಠಿಣವಾಗಿ ಆಳುವದನ್ನು ನಿಲ್ಲಿಸಿರಿ. ಅವರನ್ನು ಸುಲುಕೊಳ್ಳುವದನ್ನು ನಿಲ್ಲಿಸಿರಿ. ನ್ಯಾಯದಿಂದಿದ್ದು ಒಳ್ಳೆಯದನ್ನೆ ಮಾಡಿರಿ. ಅವರನ್ನು ಅವರ ಮನೆಗಳಿಂದ ಹೊರಡಿಸುವದನ್ನು ನಿಲ್ಲಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.
ವಜ್ರವು ಬಂಡೆಕಲ್ಲಿಗಿಂತ ಗಟ್ಟಿಯಾದ ವಸ್ತು. ಅದೇ ಪ್ರಕಾರ ನಿನ್ನ ತಲೆ ಅವರ ತಲೆಗಿಂತ ಗಟ್ಟಿಯಾಗಿರುವುದು. ಆ ಜನರಿಗೆ ಭಯಪಡಬೇಡ. ಅವರು ದಂಗೆಕೋರರಾಗಿದ್ದರೂ ಅವರ ಸಮ್ಮುಖದಲ್ಲಿ ಭಯಪಡಬೇಡ.”