Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:11 - ಪರಿಶುದ್ದ ಬೈಬಲ್‌

11 ಏಫಾ ಮತ್ತು ಬತ್ ಇವೆರಡು ಒಂದೇ ಅಳತೆಯುಳ್ಳವುಗಳಾಗಿರಬೇಕು. ಬತ್ ಮತ್ತು ಏಫಾ ಇವೆರಡೂ ಹೋಮೆರಿನ ಹತ್ತನೇ ಒಂದು ಪಾಲು. ಆ ಅಳತೆಗಳು ಹೋಮೆರಿಗೆ ಹೊಂದಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಏಫಾ (ಧಾನ್ಯದ ಅಳತೆ) ಮತ್ತು ಬತ್ (ರಸದ್ರವ್ಯದ ಅಳತೆ) ಒಂದೇ ಪ್ರಮಾಣವಾಗಿರಬೇಕು. ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಏಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಏಫಾ [ಎಂಬ ಧಾನ್ಯದ ಅಳತೆಯು] ಮತ್ತು ಬತ್ [ಎಂಬ ರಸದ್ರವ್ಯದ ಅಳತೆಯು] ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಏಫಾ ಎಂಬದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಎಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರಬೇಕು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಎಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಹೋಮೆರ್ ಎರಡಕ್ಕೂ ಪ್ರಮಾಣಿತ ಅಳತೆಗೆ ಸಂಬಂಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:11
4 ತಿಳಿವುಗಳ ಹೋಲಿಕೆ  

ಆ ದಿವಸಗಳಲ್ಲಿ ಹತ್ತು ಎಕರೆ ವಿಶಾಲವಾದ ದ್ರಾಕ್ಷಿತೋಟದಲ್ಲಿ ಸ್ವಲ್ಪ ಮಾತ್ರವೇ ದ್ರಾಕ್ಷಾರಸವು ದೊರಕುವದು. ಅನೇಕ ಚೀಲ ಬೀಜವನ್ನು ಬಿತ್ತಿದರೆ ಸ್ವಲ್ಪ ಧಾನ್ಯ ಮಾತ್ರ ಸಿಗುವುದು.”


ಜನರು ಎದ್ದು ಆ ದಿನವೆಲ್ಲಾ ಮತ್ತು ರಾತ್ರಿಯೆಲ್ಲಾ ಮತ್ತು ಮರುದಿನವೆಲ್ಲಾ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಸ್ವಲ್ಪ ಕೂಡಿಸಿಕೊಂಡವನು ಅರವತ್ತು ಕಿಲೋಗ್ರಾಂ ಕೂಡಿಸಿಕೊಂಡನು. ಬಳಿಕ ಜನರು ಲಾವಕ್ಕಿಗಳ ಮಾಂಸವನ್ನು ಪಾಳೆಯದ ಸುತ್ತಲೂ ಹರಡಿ ಬಿಸಿಲಿನಲ್ಲಿ ಒಣಗಿಸಿಕೊಂಡರು.


(ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)


ಈ ತೊಟ್ಟಿಯ ಪಾರ್ಶ್ವಗಳು ಮೂರು ಇಂಚು ದಪ್ಪವಾಗಿತ್ತು. ಈ ತೊಟ್ಟಿಯ ಕಂಠವು ಲೋಟದ ಕಂಠದಂತೆ ಅಥವಾ ಹೂಗಳ ದಳದಂತೆ ಇತ್ತು. ಈ ತೊಟ್ಟಿಯಲ್ಲಿ ಹನ್ನೊಂದು ಸಾವಿರ ಗ್ಯಾಲನ್ ನೀರನ್ನು ತುಂಬಬಹುದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು