Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:18 - ಪರಿಶುದ್ದ ಬೈಬಲ್‌

18 ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀವು ಪೂರ್ಣಾಂಗವಾದ ಹೋರಿಯನ್ನು ಆರಿಸಿಕೊಂಡು ಪವಿತ್ರಾಲಯವನ್ನು ಶುದ್ಧೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಕಳಂಕರಹಿತವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೆಯ ಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:18
20 ತಿಳಿವುಗಳ ಹೋಲಿಕೆ  

ಆರೋನನು ಮಹಾ ಪವಿತ್ರಸ್ಥಳವನ್ನು ಪರಿಶುದ್ಧ ಮಾಡಲು ಅನುಸರಿಸಬೇಕಾದ ನಿಯಮಗಳು: ಇಸ್ರೇಲರ ಅಶುದ್ಧತ್ವ, ದಂಗೆಕೋರತನ ಮತ್ತು ಅವರ ಯಾವುದೇ ಪಾಪಗಳ ಪರಿಹಾರಕ್ಕಾಗಿ ಆರೋನನು ಇದನ್ನು ಮಾಡಬೇಕು. ಅವರ ಅಶುದ್ಧತ್ವದ ನಡುವೆ ಇರುವ ದೇವದರ್ಶನಗುಡಾರಕ್ಕೂ ಅವನು ಇದನ್ನೇ ಮಾಡಬೇಕು.


ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.


“ಎರಡನೇ ದಿವಸದಲ್ಲಿ ಪೂರ್ಣಾಂಗವಾದ ಹೋತವನ್ನು ನೀನು ಅರ್ಪಿಸಬೇಕು. ಪಾಪಪರಿಹಾರಕಯಜ್ಞಕ್ಕಾಗಿ ಯಾಜಕರು ಹೇಗೆ ಯಜ್ಞವೇದಿಯನ್ನು ಪವಿತ್ರ ಮಾಡಿದರೋ ಅದೇ ರೀತಿಯಲ್ಲಿ ತಿರುಗಿ ಮಾಡಬೇಕು.


ಅವನು ಮಹಾ ಪವಿತ್ರಸ್ಥಳ, ದೇವದರ್ಶನಗುಡಾರ ಮತ್ತು ವೇದಿಕೆಯನ್ನು ಶುದ್ಧೀಕರಿಸಬೇಕು; ಅವನು ಯಾಜಕರನ್ನು ಇಸ್ರೇಲರನ್ನು ಶುದ್ಧೀಕರಿಸಬೇಕು.


“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.


ಏಳು ದಿವಸಗಳ ತನಕ ಯಾಜಕರು ವೇದಿಯನ್ನು ಪವಿತ್ರ ಮಾಡಬೇಕು ಮತ್ತು ದೇವರನ್ನು ಆರಾಧಿಸುವದಕ್ಕೆ ಸಿದ್ಧಪಡಿಸಬೇಕು.


ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಆದ್ದರಿಂದ ನೀವು ದೇವರ ರಾಜ್ಯಕ್ಕಾಗಿ ಮತ್ತು ಆತನ ಚಿತ್ತಕ್ಕನುಸಾರವಾಗಿ ಕಾರ್ಯಗಳನ್ನು ಮಾಡಲು ಬಹಳ ತವಕಪಡಬೇಕು. ಆಗ ನಿಮಗೆ ಅಗತ್ಯವಾದ ಉಳಿದವುಗಳನ್ನು ಸಹ ಕೊಡಲಾಗುವುದು.


ಚಾದೋಕನ ಸಂತತಿಯ ಯಾಜಕರ ಪಾಪಪರಿಹಾರಕ್ಕಾಗಿ ನೀನು ಒಂದು ಎಳೆ ಹೋರಿಯನ್ನು ಅರ್ಪಿಸು. ಇವರು ಲೇವಿಕುಲದ ಯಾಜಕರು. ಇವರು ನನಗೆ ಕಾಣಿಕೆಗಳನ್ನು ಅರ್ಪಿಸುವ ಸೇವೆ ಮಾಡುವವರಾಗಿರುತ್ತಾರೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಯಜ್ಞವೇದಿಯನ್ನು ಶುದ್ಧೀಕರಿಸಿದ ನಂತರ ನಿಷ್ಕಳಂಕವಾದ ಒಂದು ಹೋರಿ ಮತ್ತು ಹಿಂಡಿನಿಂದ ಒಂದು ಟಗರನ್ನು ಸಮರ್ಪಿಸಬೇಕು.


ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು