ಯೆಹೆಜ್ಕೇಲನು 45:2 - ಪರಿಶುದ್ದ ಬೈಬಲ್2 ಆ ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಈ ಭಾಗದ ಪರಿಧಿಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದರಲ್ಲಿ 250 ಮೀಟರ್ ಉದ್ದದ, 250 ಮೀಟರ್ ಅಗಲದ ಚಚ್ಚೌಕವಾದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವುದು; ಅದರ ಸುತ್ತ ಇಪ್ಪತ್ತೈದು ಮೀಟರ್ ಅಗಲ ಉಳದ ಭೂಮಿ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇದರಲ್ಲಿ ಐನೂರು ಮೊಳ ಉದ್ದದ ಐನೂರು ಮೊಳ ಅಗಲದ ಚಚ್ಚೌಕದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವದು; ಅದರ ಸುತ್ತ ಐವತ್ತು ಮೊಳ ಅಗಲ ಉಳದ ಭೂವಿು ಇರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು. ಅಧ್ಯಾಯವನ್ನು ನೋಡಿ |
ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ.