Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 45:20 - ಪರಿಶುದ್ದ ಬೈಬಲ್‌

20 ಯಾರಾದರೂ ಆಕಸ್ಮಿಕವಾಗಿ ಅಥವಾ ತಿಳಿಯದೆ ಪಾಪಮಾಡಿದ್ದಲ್ಲಿ, ಹೀಗೆಯೇ ತಿಂಗಳಿನ ಏಳನೇ ದಿವಸದಲ್ಲಿಯೂ ಮಾಡಬೇಕು. ಈ ರೀತಿಯಾಗಿ ಆಲಯವನ್ನು ಶುದ್ಧೀಕರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದೇ ಮೇರೆಗೆ ಏಳನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ, ಯಾರಾದರೂ ಆಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಯಜ್ಞಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ ಬುದ್ಧಿಹೀನರ ಅವಿವೇಕದಿಂದಾಗಲಿ ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 45:20
7 ತಿಳಿವುಗಳ ಹೋಲಿಕೆ  

ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ: “ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಪೂರ್ಣಾಂಗವಾದ ಒಂದು ಎಳೇ ಹೋರಿಯನ್ನು ತೆಗೆದುಕೊಂಡು ಅದನ್ನು ಆಲಯದ ಶುದ್ಧೀಕರಣಕ್ಕಾಗಿ ಉಪಯೋಗಿಸಬೇಕು.


ಇಸ್ರೇಲಿನ ನೀರಾವರಿಯ ಹುಲ್ಲುಗಾವಲಿನ ಇನ್ನೂರು ಕುರಿಗಳಲ್ಲಿ ಒಂದು ಕುರಿಯನ್ನು ಕೊಡಬೇಕು. “ಧಾನ್ಯನೈವೇದ್ಯಗಳಿಗೂ, ಸರ್ವಾಂಗಹೋಮಗಳಿಗೂ ಸಮಾಧಾನಯಜ್ಞಗಳಿಗೂ ಈ ಕಾಣಿಕೆಗಳನ್ನು ಕೊಡಬೇಕು. ಈ ಕಾಣಿಕೆಗಳು ಜನರನ್ನು ಶುದ್ಧಮಾಡುವವು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


“ಹೀಗೆ ಆರೋನನು ಮಹಾ ಪವಿತ್ರಸ್ಥಳವನ್ನೂ ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಶುದ್ಧೀಕರಿಸುವನು. ಬಳಿಕ ಆರೋನನು ಜೀವಂತವಾಗಿರುವ ಹೋತವನ್ನು ಯೆಹೋವನ ಬಳಿಗೆ ತರುವನು.


ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು