23 ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಒದಗಿಸಲಿ ಮತ್ತು ದೋಷಪರಿಹಾರಕ ಯಜ್ಞವಾಗಿ ಪ್ರತಿ ದಿನವೂ ಒಂದು ಹೋತವನ್ನು ಕೊಡಲಿ.
23 ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.
23 ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಯಜ್ಞಕ್ಕಾಗಿ ದಿನವಹಿ ಒಂದು ಹೋತವನ್ನು ಕೊಡಲಿ.
23 ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.