3-4 ಪವಿತ್ರವಾದ ಪ್ರದೇಶದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಸ್ಥಳವು ಯಾಜಕರಿಗೆ ಸೇರಬೇಕು. ಅವರು ಯೆಹೋವನ ಸನ್ನಿಧಿಗೆ ಹೋಗಿ ಆತನ ಪವಿತ್ರಾಲಯದಲ್ಲಿ ಆತನ ಸೇವೆ ಮಾಡುವುದರಿಂದ ಪವಿತ್ರ ಪ್ರದೇಶದ ಈ ಭಾಗವು ಅವರಿಗೋಸ್ಕರವಾಗಿಯೂ ಅವರ ಮನೆಗಳಿಗೋಸ್ಕರವಾಗಿಯೂ ಇರಬೇಕು. ಆಲಯಕ್ಕಾಗಿ ಮೀಸಲಾದ ಐನೂರು ಮೊಳ ಚೌಕವಾದ ಜಾಗವು ಈ ಪವಿತ್ರ ಪ್ರದೇಶದೊಳಗಿರಬೇಕು. ಆ ಸ್ಥಳವು ಮಹಾ ಪವಿತ್ರವಾದ ಸ್ಥಳ. ಯಾಕೆಂದರೆ ಅತ್ಯಂತ ಪವಿತ್ರವಾದ ಆಲಯವು ಅಲ್ಲಿರುತ್ತದೆ.
3 ಮೊದಲು ಅಳೆದ ಕ್ಷೇತ್ರದಲ್ಲಿ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು. ಇದರಲ್ಲಿ ಪರಿಶುದ್ಧವಾದ ಪವಿತ್ರಾಯಲವು ಇರಬೇಕು.
3 ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.
ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. “ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು.
“ಆ ಯೆಹೂದನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದವರೆಗೆ ನೀವು ಮೀಸಲಾಗಿಡಬೇಕಾದ ಭೂಮಿಯಿದೆ. ಇದಲ ಅಗಲ ಇಪ್ಪತ್ತೈದು ಸಾವಿರ ಮೊಳ. ಇದರ ಉದ್ದವು ಪೂರ್ವದಿಂದ ಪಶ್ಚಿಮದ ತನಕ ಇರುವ ಬೇರೆ ಕುಲದವರ ಸ್ವಾಸ್ತ್ಯದ ಭೂಮಿಯಷ್ಟಿರುವುದು. ಆಲಯವು ಈ ವಿಶೇಷವಾದ ಪ್ರಾಂತ್ಯದ ಮಧ್ಯದಲ್ಲಿರುವದು.
ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.