ಯೆಹೆಜ್ಕೇಲನು 45:5 - ಪರಿಶುದ್ದ ಬೈಬಲ್5 ಪವಿತ್ರ ಪ್ರದೇಶದ ಉಳಿದರ್ಧ ಭಾಗವು ಅಂದರೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಜಾಗವು ಲೇವಿಯರಿಗೆ ಮೀಸಲಾಗಿದೆ. ಅವರು ವಾಸಿಸುವ ಪಟ್ಟಣವು ಈ ಪ್ರದೇಶದಲ್ಲಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದವೂ ಮತ್ತು ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಕ್ಷೇತ್ರವು ಅವರಿಗೆ ಸೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಇಪ್ಪತ್ತೈದು ಸಾವಿರ ಮೊಳ ಉದ್ದದ ಹತ್ತು ಸಾವಿರ ಮೊಳ ಅಗಲದ ಕ್ಷೇತ್ರವು ಅವರಿಗೆ ಸ್ವಾಸ್ತ್ಯವಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು. ಅಧ್ಯಾಯವನ್ನು ನೋಡಿ |
ಈ ವಿಶೇಷವಾದ ಭೂಮಿಯನ್ನು ವಿಭಾಗಿಸಿ ಯಾಜಕರಿಗೆ ಮತ್ತು ಲೇವಿಯರಿಗೆ ಕೊಡಲಾಗುವುದು. “ಯಾಜಕರು ಆ ಪ್ರದೇಶದ ಒಂದು ಭಾಗವನ್ನು ಪಡೆದುಕೊಳ್ಳುವರು. ಆ ಭಾಗದ ಉದ್ದವು ಉತ್ತರದಿಕ್ಕಿಗೆ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ಪೂರ್ವಕ್ಕೆ ಹತ್ತು ಸಾವಿರ ಮೊಳ ಅಗಲವಾಗಿಯೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರುತ್ತದೆ. ಯೆಹೋವನ ಆಲಯವು ಈ ಪ್ರದೇಶದ ಮಧ್ಯದಲ್ಲಿರುವುದು.