ಯೆಹೆಜ್ಕೇಲನು 45:8 - ಪರಿಶುದ್ದ ಬೈಬಲ್8 ಭೂಪ್ರದೇಶದ ಈ ಭಾಗವು ಅಧಿಪತಿಗೆ ಸೇರಿದೆ. ಹೀಗೆ, ಹಿಂದಿನ ಕಾಲದ ಅಧಿಪತಿಗಳು ಮಾಡಿದಂತೆ ಈ ಅಧಿಪತಿಯು ಜನರನ್ನು ಹಿಂಸಿಸಿ ಅವರ ಭೂಮಿಯನ್ನು ಕಸಿದುಕೊಳ್ಳುವುದಿಲ್ಲ. ಉಳಿದ ಭೂಭಾಗವು ಇಸ್ರೇಲಿನ ಇತರ ಕುಲಗಳವರಿಗೆ ಯಾವಾಗಲೂ ಸೇರಿರುತ್ತದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವುದು; ಇನ್ನು ಮೇಲೆ ನನ್ನ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸುವುದಿಲ್ಲ; ದೇಶದ ಭೂಮಿಯನ್ನು ಇಸ್ರಾಯೇಲರಿಗೆ ಕುಲಕ್ಕೆ ತಕ್ಕಂತೆ ಹಂಚುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು. ಅಧ್ಯಾಯವನ್ನು ನೋಡಿ |