Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:1 - ಪರಿಶುದ್ದ ಬೈಬಲ್‌

1 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಒಳಗಿನ ಪ್ರಾಕಾರದ ಪೂರ್ವ ದಿಕ್ಕಿನ ದ್ವಾರವು ಆರು ಕೆಲಸದ ದಿವಸಗಳಲ್ಲಿ ಮುಚ್ಚಲ್ಪಡುವದು. ಅದು ಸಬ್ಬತ್ ದಿವಸಗಳಲ್ಲಿಯೂ ಅಮಾವಾಸ್ಯೆಯ ದಿವಸಗಳಲ್ಲಿಯೂ ತೆರೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವಾರದೊಳಗೆ ಕೆಲಸ ಮಾಡುವ ಆರು ದಿನಗಳಲ್ಲಿ ಒಳಗಿನ ಅಂಗಳದ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ಮುಚ್ಚಿರಬೇಕು. ಅದನ್ನು ಸಬ್ಬತ್ ದಿನದಲ್ಲಿಯೂ, ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:1
15 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಆರಾಧನಾ ದಿನದಲ್ಲಿ ಪ್ರತಿಯೊಬ್ಬರೂ ಬಂದು ನನ್ನನ್ನು ಆರಾಧಿಸುವರು. ಪ್ರತಿಯೊಂದು ಸಬ್ಬತ್ ದಿನದಲ್ಲೂ ತಿಂಗಳ ಮೊದಲ ದಿನದಲ್ಲೂ ಅವರು ನನ್ನ ಬಳಿಗೆ ಬರುವರು.”


ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.


ಯೇಸು ಸಬ್ಬತ್‌ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್‌ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.


“ಅಮಾವಾಸ್ಯೆ ದಿವಸ ಅವನು ಒಂದು ಎಳೇ ಪೂರ್ಣಾಂಗವಾದ ಹೋರಿಯನ್ನು ಸಮರ್ಪಿಸಬೇಕು. ಅದರ ಜೊತೆಗೆ ಆರು ಪೂರ್ಣಾಂಗವಾದ ಕುರಿಗಳನ್ನೂ ಒಂದು ಪೂರ್ಣಾಂಗವಾದ ಟಗರನ್ನೂ ಸಮರ್ಪಿಸಬೇಕು.


ದೇವರು ನನ್ನನ್ನು ಯೆಹೋವನಾಲಯದ ಒಳಗಿನ ಅಂಗಳಕ್ಕೆ ಕರಕೊಂಡು ಹೋದನು. ಯೆಹೋವನಾಲಯದ ಪ್ರವೇಶ ಸ್ಥಳದಲ್ಲಿ ಮಂಟಪಕ್ಕೂ ಯಜ್ಞವೇದಿಕೆಗೂ ನಡುವೆ ಪವಿತ್ರ ಸ್ಥಳದ ಕಡೆಗೆ ಬೆನ್ನು ಮಾಡಿಕೊಂಡಿದ್ದ ಇಪ್ಪತ್ತೈದು ಮಂದಿ ಇದ್ದರು. ಪೂರ್ವಕ್ಕೆ ಮುಖಮಾಡಿಕೊಂಡಿದ್ದ ಅವರು ಸೂರ್ಯನನ್ನು ಪೂಜಿಸುತ್ತಿದ್ದರು.


ನಿನ್ನ ಮುಖದಲ್ಲಿ ಬೆವರು ಹರಿಯುವ ತನಕ ನೀನು ಆಹಾರಕ್ಕಾಗಿ ಕಷ್ಟಪಟ್ಟು ದುಡಿಯುವೆ. ನೀನು ಸಾಯುವ ದಿನದವರೆಗೆ ಕಷ್ಟಪಟ್ಟು ಕೆಲಸ ಮಾಡುವೆ. ಆಮೇಲೆ ನೀನು ಮಣ್ಣಾಗುವೆ. ನಾನು ನಿನ್ನನ್ನು ನಿರ್ಮಿಸಲು ಮಣ್ಣನ್ನು ಉಪಯೋಗಿಸಿದೆ. ನೀನು ಸತ್ತಾಗ ಮತ್ತೆ ಮಣ್ಣೇ ಆಗುವೆ” ಎಂದನು.


ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.


ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.


ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಿನ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.


ಆ ಮನುಷ್ಯನು ನನ್ನನ್ನು ಪೂರ್ವದ ದ್ವಾರಕ್ಕೆ ಕರೆದುಕೊಂಡು ಹೋದನು.


ಸಬ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದ್ವಾರದ ಬಳಿ ಆರಾಧಿಸುವರು.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು