Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:12 - ಪರಿಶುದ್ದ ಬೈಬಲ್‌

12 “ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರಭುವು ಸ್ವಂತ ಇಚ್ಫೆಯಿಂದ ಕಾಣಿಕೆಯನ್ನಾಗಲಿ ಸರ್ವಾಂಗಹೋಮವನ್ನಾಗಲಿ ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಮೂಡಲ ಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:12
19 ತಿಳಿವುಗಳ ಹೋಲಿಕೆ  

ಆದರೆ ವಿಶೇಷವಾದ ಹಬ್ಬದ ಆಚರಣೆಗಳಿಗಾಗಿ ಅಧಿಪತಿಯು ಕಾಣಿಕೆಗಳನ್ನು ಕೊಡಲೇಬೇಕು. ಅಧಿಪತಿಯು ಪಾಪಪರಿಹಾರಕಯಜ್ಞಗಳನ್ನೂ ಧಾನ್ಯಾರ್ಪಣೆಗಳನ್ನೂ ಪಾನದ್ರವ್ಯಾರ್ಪಣೆಗಳನ್ನೂ ಕೊಡಬೇಕು. ಈ ಕಾಣಿಕೆಗಳನ್ನು ಪ್ರತಿಯೊಂದು ಹಬ್ಬದ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸಬ್ಬತ್ ದಿನದಲ್ಲಿಯೂ ಇಸ್ರೇಲ್ ಜನಾಂಗದ ಎಲ್ಲಾ ವಿಶೇಷ ಹಬ್ಬಗಳಲ್ಲಿಯೂ ಅರ್ಪಿಸಬೇಕು. ಇಸ್ರೇಲ್ ಸಂತತಿಯ ಜನರನ್ನು ಶುದ್ಧೀಕರಿಸುವುದಕ್ಕಾಗಿ ಅಧಿಪತಿಯು ಈ ಕಾಣಿಕೆಗಳನ್ನು ಕೊಡಬೇಕು.”


“ಅಧಿಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದ್ವಾರದಿಂದ ಪ್ರವೇಶಿಸಬೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಬೇಕು.


ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”


ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು.


ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.


ಇದಾದ ಬಳಿಕ ಅವರು ನಿತ್ಯ ಸರ್ವಾಂಗಹೋಮವನ್ನೂ ಅಮಾವಾಸ್ಯೆ ಮತ್ತು ಇತರ ಹಬ್ಬದ ದಿನಗಳಲ್ಲಿ ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಬೇಕಾದ ಯಜ್ಞಹೋಮಗಳನ್ನೂ ಸಮರ್ಪಿಸಿದರು. ಜನರು ತಾವು ಯೆಹೋವನಿಗೆ ಕೊಡಬೇಕೆಂದಿದ್ದ ಇತರ ಕಾಣಿಕೆಗಳನ್ನು ಸಹ ತಂದು ಕೊಡಲಾರಂಭಿಸಿದರು.


ಆದ್ದರಿಂದ ಯಾವ ಸ್ಥಳದಲ್ಲಿಯಾದರೂ ಇಸ್ರೇಲರಲ್ಲಿ ಉಳಿದವರು ಇದ್ದಲ್ಲಿ ಅಂಥವರಿಗೆ ಆ ಸ್ಥಳದವರು ಸಹಾಯ ಮಾಡಬೇಕು. ಅವರಿಗೆ ಬೆಳ್ಳಿ, ಬಂಗಾರ, ಪಶುಗಳನ್ನು ಮತ್ತು ಇತರ ವಸ್ತುಗಳನ್ನು ಕೊಡಲಿ. ಜೆರುಸಲೇಮಿನಲ್ಲಿನ ದೇವಾಲಯಕ್ಕೆ ಕಾಣಿಕೆಗಳನ್ನು ಕೊಡಲಿ.”


ಸೊಲೊಮೋನನು ಮತ್ತು ಇಸ್ರೇಲರೆಲ್ಲರೂ ಆ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ನೆರೆದು ಬಂದರು. ಸೊಲೊಮೋನನು ಮತ್ತು ಎಲ್ಲಾ ಇಸ್ರೇಲರೂ ಲೆಕ್ಕವಿಲ್ಲದಷ್ಟು ಕುರಿಗಳನ್ನೂ ಹೋರಿಗಳನ್ನೂ ಯಜ್ಞ ಮಾಡಿದರು.


ಮರುದಿವಸ ಜನರು ಯೆಹೋವನಿಗೆ ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿದರು. ಒಂದು ಸಾವಿರ ಹೋರಿಗಳು, ಒಂದುಸಾವಿರ ಟಗರುಗಳು, ಒಂದುಸಾವಿರ ಆಡುಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಿದರು. ಇಡೀ ಇಸ್ರೇಲ್ ಜನಾಂಗಕ್ಕಾಗಿ ಯಜ್ಞವನ್ನರ್ಪಿಸಿದರು.


ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.


“ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”


“ಯಾವನಾದರೂ ಸ್ವಇಚ್ಛೆಯ ಕಾಣಿಕೆಗಾಗಲಿ ಹರಕೆಯನ್ನು ಸಲ್ಲಿಸುವುದಕ್ಕಾಗಲಿ ಸಮಾಧಾನಯಜ್ಞ ಅರ್ಪಿಸಬಹುದು ಅಥವಾ ಆ ವ್ಯಕ್ತಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರೆ, ಅವನು ಅದರ ಯಜ್ಞಮಾಂಸವನ್ನು ಸಮರ್ಪಿಸಿದ ದಿನದಲ್ಲಿಯೇ ತಿನ್ನಬೇಕು. ಉಳಿದದ್ದನ್ನು ಮರುದಿನ ತಿನ್ನಬೇಕು.


“ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು.


ಆ ಬಳಿಕ ನನ್ನನ್ನು ಆ ಮನುಷ್ಯನು ಆಲಯದ ಪೂರ್ವದ್ವಾರಕ್ಕೆ ತಂದನು. ನಾವು ದ್ವಾರದ ಹೊರಗಿದ್ದೆವು. ದ್ವಾರವು ಮುಚ್ಚಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು