ಯೆಹೆಜ್ಕೇಲನು 46:14 - ಪರಿಶುದ್ದ ಬೈಬಲ್14 ಪ್ರತಿ ಮುಂಜಾನೆ ನೀನು ಐದು ಸೇರು ಗೋಧಿಹಿಟ್ಟನ್ನೂ ಎರಡು ಸೇರು ಎಣ್ಣೆಯನ್ನೂ ಒಟ್ಟಾಗಿ ಬೆರೆಸಿ ಪ್ರತಿದಿನ ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿ |