Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:15 - ಪರಿಶುದ್ದ ಬೈಬಲ್‌

15 ಹೀಗೆ ಅವರು ಶಾಶ್ವತವಾಗಿ ಕುರಿ, ಧಾನ್ಯ ಮತ್ತು ಎಣ್ಣೆಯನ್ನು ಪ್ರತೀ ಮುಂಜಾನೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯಾಜಕರು ಕುರಿಯನ್ನೂ ಧಾನ್ಯನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯದಹನ ಬಲಿಯಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಜಕರು ಕುರಿಯನ್ನೂ ಧಾನ್ಯ ನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯಸರ್ವಾಂಗಹೋಮವಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:15
6 ತಿಳಿವುಗಳ ಹೋಲಿಕೆ  

ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.


ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


(ಈ ಸರ್ವಾಂಗಹೋಮವನ್ನು ಸೀನಾಯಿ ಬೆಟ್ಟದ ಮೇಲೆ ಯೆಹೋವನಿಗೆ ತ್ಯಾಗಮಯವಾದ ಕಾಣಿಕೆಯಾಗಿಯೂ ಸುಗಂಧ ವಾಸನೆಯಾಗಿಯೂ ಕ್ರಮವಾಗಿ ಅರ್ಪಿಸಲಾಯಿತು.)


“ನೀನು ಪ್ರತಿದಿನ ಈ ಸರ್ವಾಂಗಹೋಮವನ್ನು ಸಮರ್ಪಣೆಯಾಗಿ ಅರ್ಪಿಸಬೇಕು. ದೇವದರ್ಶನಗುಡಾರದ ದ್ವಾರದಲ್ಲಿ ಯೆಹೋವನ ಮುಂದೆ ಇದನ್ನು ಮಾಡು. ನೀನು ಸಮರ್ಪಣೆಯನ್ನು ಮಾಡುವಾಗ ಯೆಹೋವನಾದ ನಾನು ಅಲ್ಲಿ ನಿನ್ನನ್ನು ಸಂಧಿಸಿ ನಿನ್ನೊಡನೆ ಮಾತಾಡುವೆನು.


“ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು