ಯೆಹೆಜ್ಕೇಲನು 46:17 - ಪರಿಶುದ್ದ ಬೈಬಲ್17 ಆದರೆ ಆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ದಾಸನಿಗೆ ಉಚಿತವಾಗಿ ಕೊಟ್ಟರೆ, ಆ ಭೂಮಿಯು ಬಿಡುಗಡೆ ಸಂವತ್ಸರದ ತನಕ ಮಾತ್ರವೇ ದಾಸನದ್ದಾಗಿರುವದು. ಅನಂತರ ಅದು ರಾಜನಿಗೆ ಹಿಂದೆ ಹೋಗುವದು. ರಾಜನ ಗಂಡುಮಕ್ಕಳು ಮಾತ್ರ ರಾಜನಿಂದ ಹೊಂದಿದ ಭೂಮಿಯನ್ನು ನಿತ್ಯಕಾಲಕ್ಕೂ ಅನುಭೋಗಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅರಸನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನ ಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆ ಮೇಲೆ ಅದು ಪುನಃ ಅರಸನ ವಶವಾಗುವುದು; ಆದರೆ ಅರಸನು ತನ್ನ ಮಕ್ಕಳಿಗೆ ಕೊಟ್ಟ ಸ್ವತ್ತು ಅವರಿಗೇ ಸೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆದರೆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆಮೇಲೆ ಅದು ಪುನಃ ರಾಜನ ವಶವಾಗುವುದು. ಆದರೆ ರಾಜನು ತನ್ನ ಮಕ್ಕಳಿಗೆ ಕೊಟ್ಟ ಸೊತ್ತು ಅವರಿಗೇ ಸೇರಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆದರೆ ಪ್ರಭುವು ತನ್ನ ಭೂವಿುಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ ಬಿಡುಗಡೆಯ ವರುಷದವರೆಗೆ ಅದು ಅವನ ಅಧೀನವಾಗಿರುವದು; ಆಮೇಲೆ ಅದು ಪುನಃ ಪ್ರಭುವಿನ ವಶವಾಗುವದು; ಆದರೆ ಪ್ರಭುವು ತನ್ನ ಮಕ್ಕಳಿಗೆ ಕೊಟ್ಟ ಸ್ವಾಸ್ತ್ಯವು ಅವರಿಗೇ ಸೇರಿಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ. ಅಧ್ಯಾಯವನ್ನು ನೋಡಿ |