Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 46:2 - ಪರಿಶುದ್ದ ಬೈಬಲ್‌

2 ಅಧಿಪತಿಯು ಆ ದ್ವಾರದ ಕೈಸಾಲೆಯೊಳಗೆ ಪ್ರವೇಶಿಸಿ ಅದರ ನಿಲುವು ಕಂಬದ ಬಳಿಯಲ್ಲಿ ನಿಲ್ಲುವನು. ಅಧಿಪತಿಯು ಕೊಡುವ ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞವನ್ನು ಆಗ ಯಾಜಕರು ಸಮರ್ಪಿಸುವರು. ಅಧಿಪತಿಯು ಆ ದ್ವಾರದ ಮುಂಭಾಗದಲ್ಲಿ ಆರಾಧಿಸುವನು. ಅನಂತರ ಅವನು ಹೊರಗೆ ಹೋಗುವನು. ಆ ದ್ವಾರದ ಕದಗಳು ಸಾಯಂಕಾಲದ ತನಕ ತೆರೆದೇ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ, ಬಾಗಿಲಿನ ಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞ ಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲಿನ ಹೊಸ್ತಿಲಿನಲ್ಲಿ ಅಡ್ಡಬೀಳಲಿ, ಆ ಮೇಲೆ ಹೊರಟು ಹೋಗಲಿ. ಅ ದಿನ ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 46:2
18 ತಿಳಿವುಗಳ ಹೋಲಿಕೆ  

ಜನರ ಅಧಿಪತಿಯು ಯೆಹೋವನ ಸನ್ನಿಧಿಯಲ್ಲಿ ಊಟಮಾಡಲು ಬರುವಾಗ ಅವನು ಮಾತ್ರ ಈ ದ್ವಾರದ ಬಳಿ ಕುಳಿತುಕೊಳ್ಳಬಹುದು. ಅಧಿಪತಿಯು ದ್ವಾರದ ಮಂಟಪದ ಮೂಲಕ ಪ್ರವೇಶಿಸಬೇಕು ಮತ್ತು ಅದೇ ಮಾರ್ಗದಲ್ಲಿ ಹೊರ ಬರಬೇಕು.”


“ಅಧಿಪತಿಯು ಆಲಯದ ಸಂಕೀರ್ಣ ಪ್ರವೇಶಿಸುವಾಗ ಅವನು ಪೂರ್ವದಿಕ್ಕಿನ ದ್ವಾರದಿಂದ ಪ್ರವೇಶಿಸಬೇಕು. ಮತ್ತು ಅದರ ಮೂಲಕವೇ ಅವನು ಹೊರಗೆ ಹೋಗಬೇಕು.


ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.


ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.


“ರಾಜನು ತನ್ನ ಇಚ್ಛೆಯ ಪ್ರಕಾರ ಯೆಹೋವನಿಗೆ ಸರ್ವಾಂಗಹೋಮ ಅಥವಾ ಸಮಾಧಾನಯಜ್ಞ ಅಥವಾ ಮನಃಪೂರ್ವಕವಾದ ಕಾಣಿಕೆಯನ್ನು ಸಮರ್ಪಿಸುವಾಗ ಅವನಿಗಾಗಿ ಪೂರ್ವದ ಬಾಗಿಲು ತೆಗೆಯಲ್ಪಡಬೇಕು. ಆದರೆ ಅವನು ಸಬ್ಬತ್ ದಿನದಂತೆ ತನ್ನ ಕಾಣಿಕೆಗಳನ್ನು ಸಮರ್ಪಿಸಿದ ನಂತರ ಅವನು ಹಿಂತಿರುಗಿದಾಗ ಪ್ರವೇಶ ದ್ವಾರವು ಮುಚ್ಚಲ್ಪಡಬೇಕು.


ಪಾಪಪರಿಹಾರಕಯಜ್ಞಕ್ಕೆ ಬಲಿಯರ್ಪಿಸಿದ್ದ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಅದನ್ನು ಆಲಯದ ಬಾಗಿಲಿನ ನಿಲುವು ಕಂಬಗಳಿಗೂ, ಯಜ್ಞವೇದಿಕೆಯ ಸಜ್ಜದ ನಾಲ್ಕು ಮೂಲೆಗಳಿಗೂ ಮತ್ತು ಒಳಗಿನ ಪ್ರಾಕಾರದ ಪ್ರವೇಶ ದ್ವಾರದ ಎರಡು ನಿಲುವು ಕಂಬಗಳಿಗೂ ಹಚ್ಚಬೇಕು.


ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


ಯಜ್ಞಸಮರ್ಪಣೆ ಮುಗಿದ ಬಳಿಕ ಅರಸನಾದ ಹಿಜ್ಕೀಯನೂ ಪ್ರಜೆಗಳೂ ಯೆಹೋವನಿಗೆ ಸಾಷ್ಟಾಂಗನಮಸ್ಕಾರ ಮಾಡಿದರು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,


ಆಗ ದಾವೀದನು ಪವಿತ್ರಗುಡಾರಕ್ಕೆ ಹೋಗಿ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರಾದ ಯೆಹೋವನೇ, ನೀನು ನನ್ನನ್ನೂ ನನ್ನ ಕುಟುಂಬವನ್ನೂ ಎಷ್ಟೋ ಆಶೀರ್ವದಿಸಿರುವೆ. ನೀನು ಯಾಕೆ ಹೀಗೆ ಮಾಡಿದಿಯೊ ನನಗೆ ತಿಳಿಯುತ್ತಿಲ್ಲ.


ಇವರೆಲ್ಲರೂ ಪೂರ್ವದಿಕ್ಕಿನಲ್ಲಿರುವ ರಾಜನ ಹೆಬ್ಬಾಗಿಲನ್ನು ಕಾಯುತ್ತಿರುತ್ತಾರೆ. ಇವರೆಲ್ಲಾ ಲೇವಿ ಕುಲಕ್ಕೆ ಸೇರಿದವರು.


ಅವನು ಕೆಳಗಣ ಪ್ರವೇಶ ದ್ವಾರದ ಒಳಭಾಗದಿಂದ ಹಿಡಿದು ಒಳಗಿನ ಪ್ರಾಕಾರದ ಹೊರಭಾಗದ ತನಕ ಅಳತೆ ಮಾಡಿದಾಗ ಅದು ನೂರು ಮೊಳ ಉದ್ದ ಪೂರ್ವದಿಕ್ಕಿನಲ್ಲಿಯೂ, ಉತ್ತರದಿಕ್ಕಿನಲ್ಲಿಯೂ ಇತ್ತು.


ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು