ಯೆಹೆಜ್ಕೇಲನು 46:21 - ಪರಿಶುದ್ದ ಬೈಬಲ್21 ಆಮೇಲೆ ಅವನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ನಾಲ್ಕು ಮೂಲೆಗಳಿಗೆ ನನ್ನನ್ನು ಕರೆದುಕೊಂಡು ಹೋದನು. ವಿಶಾಲವಾದ ಪ್ರಾಕಾರದ ಪ್ರತೀ ಮೂಲೆಗಳಲ್ಲಿ ಇನ್ನೊಂದು ಚಿಕ್ಕ ಪ್ರಾಕಾರವಿರುವದನ್ನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಬರಮಾಡಿ, ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡು ಹೋದನು. ಇಗೋ, ಅಂಗಳದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತರುವಾಯ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡುಹೋದನು. ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತರುವಾಯ ಅವನು ನನ್ನನ್ನು ಹೊರಗಣ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರಕೊಂಡು ಹೋದನು; ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿ |
ಅವನು ನನಗೆ ಹೇಳಿದ್ದೇನೆಂದರೆ, “ಈ ಸ್ಥಳದಲ್ಲಿ ಯಾಜಕರು ದೋಷಪರಿಹಾರಕ ಮತ್ತು ಪಾಪಪರಿಹಾರಕಯಜ್ಞದ ಮಾಂಸಗಳನ್ನು ಬೇಯಿಸುವರು. ಇದೇ ಸ್ಥಳದಲ್ಲಿ ಧಾನ್ಯಸಮರ್ಪಣೆಯ ಹಿಟ್ಟಿನಿಂದ ರೊಟ್ಟಿಯನ್ನು ಸುಡುವರು. ಇದನ್ನು ಇಲ್ಲಿಯೇ ಯಾಕೆ ಮಾಡುತ್ತಾರೆಂದರೆ ಅವರು ಹೊರಗಿನ ಪ್ರಾಕಾರದೊಳಗೆ ಆ ಪವಿತ್ರ ವಸ್ತುವನ್ನು ತರುವ ಅವಶ್ಯಕತೆ ಇರುವದಿಲ್ಲ. ಸಾರ್ವಜನಿಕರು ಕೂಡುವ ಸ್ಥಳದಲ್ಲಿ ಆ ಪವಿತ್ರ ವಸ್ತುವನ್ನು ತರಬಾರದು.”